ಫೆ.15ಕ್ಕೆ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ

ಕರ್ನಾಟಕ ರಾಜ್ಯದಲ್ಲಿ ಕಾರ್ಯಚರಿಸುತ್ತಿರುವ ವಸತಿ ಶಾಲೆಗಳ ಆರನೇ ತರಗತಿ ಪ್ರವೇಶಕ್ಕಾಗಿ ಪರೀಕ್ಷೆಯನ್ನು ಫೆಬ್ರವರಿ 15 ಕ್ಕೆ ನಡೆಸಲು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ನಿರ್ಧರಿಸಿದೆ. ರಾಜ್ಯದಲ್ಲಿನ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಇಂದಿರಾಗಾಂಧಿ, ಡಾ. ಬಿ.ಆರ್ ಅಂಬೇಡ್ಕರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಸಂಗೊಳ್ಳಿ ರಾಯಣ್ಣ, ಕವಿರನ್ನ, ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ದಾಖಲಾತಿ ಪಡೆಯಲು ನಡೆಸುವ ಪ್ರವೇಶ ಪರೀಕ್ಷೆ 2025ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಫೆಬ್ರವರಿ 15ನೇ ಶನಿವಾರದಂದು ಮಧ್ಯಾಹ್ನ 2:30 ರಿಂದ ಸಂಜೆ 4:30ವರೆಗೆ ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷೆಯಲ್ಲಿ ಒಟ್ಟು 100 ಪ್ರಶ್ನೆಗಳಿದ್ದು ಗರಿಷ್ಠ 100 ಅಂಕಗಳನ್ನು ಹೊಂದಿರುತ್ತದೆ.

ಪರೀಕ್ಷಾ ಕೊಠಡಿಗೆ ಪ್ರವೇಶಿಸಲು ಹಾಗೂ ನಿಗದಿ ಪಡಿಸಿದ ಆಸನದಲ್ಲಿ ಕುಳಿತುಕೊಳ್ಳುವ ಮುನ್ನ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪರೀಕ್ಷಕರಿಗೆ ತೋರಿಸಬೇಕು. ಅಲ್ಲದೆ ಪ್ರವೇಶ ಪತ್ರದಲ್ಲಿನ ಭಾವಚಿತ್ರ ಹಾಗೂ ಅಭ್ಯರ್ಥಿಯ ಪರಿಶೀಲನೆಯನ್ನು ಮಾಡಲಾಗುತ್ತದೆ.

ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಗೆ ಆಧುನಿಕ ಎಲೆಕ್ಟ್ರಾನಿಕ್ ಸಾಧನೆಗಳು, ಕ್ಯಾಲ್ಕುಲೇಟರ್, ಬ್ಲೂಟೂತ್, ಸ್ಮಾರ್ಟ್ ವಾಚ್, ಮೊಬೈಲ್ ಫೋನ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.

Post a Comment

0 Comments