ಪೆ. 24ಕ್ಕೆ ಪಿಎಂ ಕಿಸಾನ್ 19ನೇ ಕಂತಿನ ಹಣ ಬಿಡುಗಡೆ


ರೈತರೇ ಬೆನ್ನೆಲುಬಾಗಿರುವ ನಮ್ಮ ದೇಶದ ಕೃಷಿ ಸಮುದಾಯದ ಜನರ ಆದಾಯ ಹೆಚ್ಚಿಸುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯೇ ಪಿಎಂ ಕಿಸಾನ್ ಯೋಜನೆ. ಕೃಷಿಕರ ಆರ್ಥಿಕತೆ ಹೆಚ್ಚಿಸುವ ಸರ್ಕಾರದ ಪ್ರಯತ್ನದ ಭಾಗವಾಗಿ ಸುಮಾರು 22,000 ಕೋಟಿ ರೂಪಾಯಿಗಳನ್ನು ನೇರವಾಗಿ 9.8 ಕೋಟಿ ರೈತ ಬಾಂಧವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುವ ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಬಿಡುಗಡೆ ಮಾಡಲಿದ್ದಾರೆ.
ಈ ಯೋಜನೆಯಲ್ಲಿ, ಪ್ರತಿ ರೈತ ಫಲಾನುಭವಿಯು ವರ್ಷದ ನಾಲ್ಕು ತಿಂಗಳಿಗೊಮ್ಮೆ ಎರಡು ಸಾವಿರ ರೂಪಾಯಿಗಳಂತೆ ಮೂರು ಕಂತುಗಳಲ್ಲಿ 6000 ರೂಪಾಯಿಗಳ ಆರ್ಥಿಕ ಪ್ರಯೋಜನವನ್ನು ಪಡೆಯುತ್ತಾರೆ. 

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಫೆಬ್ರವರಿ 24ರಂದು ಬಿಹಾರದ ಭಾಗಲ್ಪುರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಧಾನಿಯವರು ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಅರ್ಹ 9.8 ಕೋಟಿ ರೈತರ ಖಾತೆಗೆ 22,000 ಕೋಟಿ ರೂಪಾಯಿಗಳನ್ನು ಜಮೆ ಮಾಡಲಾಗುತ್ತದೆ. ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ/ ಪಿಎಮ್ ಕಿಸಾನ್ ಯೋಜನೆ ಅಡಿಯಲ್ಲಿ ಸರ್ಕಾರ ಇಲ್ಲಿಯವರೆಗೆ ಒಟ್ಟು 3.46 ಲಕ್ಷ ಕೋಟಿ ರೂಪಾಯಿಗಳನ್ನು ವಿತರಿಸಿದೆ. ಮುಂದಿನ ವಾರ 19 ನೇ ಕಂತು ಬಿಡುಗಡೆಯಾಗಲಿದ್ದು,ಆ ನಂತರ ಈ ಸಂಖ್ಯೆ 3.68 ಲಕ್ಷ ಕೋಟಿ ರೂಪಾಯಿಗೆ ಏರಲಿದೆ ಎಂದು ಚೌಹಾಣ್ ಹೇಳಿದ್ದಾರೆ.



Post a Comment

0 Comments