26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್



ಭಾರತದ ಚುನಾವಣಾ ಆಯೋಗದ 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅವರು ಬುಧವಾರ ಅಧಿಕಾರವಹಿಸಿಕೊಂಡಿದ್ದಾರೆ.
ಚುನಾವಣಾ ಆಯೋಗದ ಸದಸ್ಯರ ನೇಮಕತ್ವಕ್ಕೆ ಸಂಬಂಧಿಸಿದಂತೆ ರೂಪಿಸಲಾಗಿರುವ ಹೊಸ ಕಾಯ್ದೆಗೆ ಅನುಗುಣವಾಗಿ ನೇಮಕವಾಗಿರುವ ಮೊದಲ ಸಿಇಸಿ ಜ್ಞಾನೇಶ್ ಕುಮಾರ್ ಆಗಿದ್ದಾರೆ.
ಕಾನ್ಪುರ ಐಐಟಿ ಪದವೀಧರರಾಗಿರುವ ಜ್ಞಾನೇಶ್ ಕುಮಾರ್ 1988ನೇ ಬ್ಯಾಚ್ನ ಕೇರಳ ಕೇಡರ್ ನ ಐಎಎಸ್ ಅಧಿಕಾರಿ. ವಿವಿಧ ಇಲಾಖೆಗಳಲ್ಲಿ ಕೆಲಸ ನಿರ್ವಹಿಸಿರುವ ಜ್ಞಾನೇಶ್ ಬಹಳಷ್ಟು ಸೇವಾನುಭವವನ್ನು ಹೊಂದಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯ ಅಡಿಯಲ್ಲಿ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸುವ ತೀರ್ಮಾನವನ್ನು ಅನುಷ್ಠಾನಕ್ಕೆ ತರುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು. ಇವರನ್ನು 2024ರ ಮಾರ್ಚ್ 15 ರಂದು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿತ್ತು. ಇವರು ಕೇರಳದ ಎರ್ನಾಕುಲಂ ನಲ್ಲಿ ಸಹಾಯಕ ಕಲೆಕ್ಟರ್ ಆಗಿಯೂ, ಕೇರಳ ಸರಕಾರದ ವಿವಿಧ ಇಲಾಖೆಗಳ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ರಕ್ಷಣಾ ಸಚಿವಾಲಯ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ, ಸಂಸದೀಯ ವ್ಯವಹಾರಗಳ ಸಚಿವಾಲಯ ಹಾಗೂ ಸಹಕಾರ ಸಚಿವಾಲಯದ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಅನುಭವ ಜ್ಞಾನೇಶ್ ಕುಮಾರ್ ಅವರದ್ದಾಗಿದೆ. ಇವರ ಅಧಿಕಾರ ಅವಧಿಯು 2029ರ ಜನವರಿ 26ರವರೆಗೆ ಇರಲಿದೆ.

1989ರ ಹರಿಯಾಣ ಕೇಡರ್ ನ ಐಎಎಸ್ ಅಧಿಕಾರಿ ವಿವೇಕ್ ಜೋಷಿ ಅವರನ್ನು ಚುನಾವಣಾ ಆಯುಕ್ತರನ್ನಾಗಿ (ಇಸಿ) ನೇಮಿಸಲಾಗಿದೆ.


Post a Comment

0 Comments