ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಕ್ಷವನ್ನು ಮತದಾರರು ತೊರೆದು ಈ ಬಾರಿ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. 70 ಸೀಟುಗಳಲ್ಲಿ ಬಿಜೆಪಿಯು 48 ಸ್ಥಾನಗಳನ್ನು ಗೆದ್ದಿದ್ದು ಆಮ್ ಆದ್ಮಿ ಪಕ್ಷವು 22 ಸ್ಥಾನಗಳಲ್ಲಿ ಗೆಲುವು ಪಡೆದಿದೆ. ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಒಂದೇ ಒಂದು ಸ್ಥಾನವನ್ನೂ ಗೆಲ್ಲದೆ ಹೀನಾಯವಾಗಿ ಸೋಲುಂಡಿದೆ.
ಬಿಜೆಪಿಯು ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಗ್ಯಾರಂಟಿಗಳೇ ಗೆಲುವಿಗೆ ಪ್ರಮುಖ ಕಾರಣವೆಂದು ಕೆಲವರು ಹೇಳುತ್ತಾರೆ. ಇನ್ನೊಂದೆಡೆ ಅರವಿಂದ್ ಕೇಜ್ರಿವಾಲ್ ಅವರ ಭ್ರಷ್ಟಾಚಾರದ ಆರೋಪಗಳನ್ನು ಕಂಡು ಬೇಸತ್ತ ದೆಹಲಿ ಜನರು ಬಿಜೆಪಿ ಸರ್ಕಾರಕ್ಕೆ ಆಡಳಿತದ ಗದ್ದುಗೆಯನ್ನು ನೀಡಿದ್ದಾರೆ. ದೆಹಲಿಯಲ್ಲಿ ನೂತನ ಸರಕಾರದ ಮುಖ್ಯಮಂತ್ರಿ ಪಟ್ಟವನ್ನು ಯಾರು ಅಲಂಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.
0 Comments