ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ

ಕುಕಿ ಮತ್ತು ಮೈಥೇಯಿ ಸಮುದಾಯಗಳ ಮಧ್ಯೆ ವರ್ಷಗಳಿಂದ ನಡೆಯುತ್ತಿರುವ ಸಂಘರ್ಷದಲ್ಲಿ ಸಿಲುಕಿ ಬಂಡಾಯದ ಭೀತಿ ಎದುರಿಸಿ ಬಹುಮತ ಕಳೆದುಕೊಂಡ ಹಿನ್ನೆಲೆಯಲ್ಲಿ ಮಣಿಪುರ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಫೆಬ್ರವರಿ 13 ರಿಂದ ಜಾರಿಗೆ ಬಂದಿದೆ.


ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬೀರೇನ್ ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ನಾಲ್ಕು ದಿನಗಳು ಕಳೆದ ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಆಡಳಿತದ ಆದೇಶವನ್ನು ಮಾಡಿದ್ದಾರೆ. ಈ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿದ್ದು, ಎರಡು ಸಮುದಾಯಗಳ ನಡುವೆ ನಡೆಯುತ್ತಿರುವ ಸಂಘರ್ಷದಿಂದಾಗಿ 200ಕ್ಕೂ ಅಧಿಕ ಜನರು ಸಾವಿಗಿಡಾಗಿದ್ದಾರೆ. ಪರಿಸ್ಥಿತಿ ಅರಿತ ಕೇಂದ್ರ ಬಿಜೆಪಿ ಸರಕಾರವು ಇದನ್ನು ಹತೋಟಿಕೆ ತರಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಹೀಗಾಗಿ, ಸಂವಿಧಾನದ 356ನೇ ವಿಧಿಯಡಿ ದತ್ತವಾಗಿರುವ ಅಧಿಕಾರವನ್ನು ಬಳಸಿಕೊಂಡು ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಲಾಗಿದೆ. ರಾಜ್ಯ ಸರಕಾರ ನಿರ್ವಹಿಸಬೇಕಾಗಿದ್ದ ಎಲ್ಲಾ ಕಾರ್ಯ ಮತ್ತು ಅಧಿಕಾರವನ್ನು ಇನ್ನು ಮುಂದೆ ಈ ರಾಜ್ಯದ ರಾಜ್ಯಪಾಲರು ವಹಿಸಿಕೊಳ್ಳಲಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Post a Comment

0 Comments