ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ ರಾಷ್ಟ್ರದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಮೊದಲಾದ ಶ್ರೇಷ್ಠ ನಾಯಕರ ಸಮ್ಮುಖದಲ್ಲಿ, ರಾಜ್ಯಪಾಲರಾದ ವಿ.ಕೆ. ಸಕ್ಸೆನಾ ಪ್ರಮಾಣ ವಚನ ಬೋಧಿಸಿದರು. ಸಚಿವರಾಗಿ ಪರ್ವೇಶ್ ಸಾಹಿಬ್ ಸಿಂಗ್, ಆಶಿಶ್ ಸೂದ್, ಮಂಜಿಂಧರ್ ಸಿಂಗ್ ಶಿರ್ಸಾ, ರವೀಂದರ್ ಇಂದ್ರಜ್ ಸಿಂಗ್, ಕಪಿಲ್ ಮಿಶ್ರಾ ಮತ್ತು ಪಂಕಜ್ ಕುಮಾರ್ ಸಿಂಗ್ ಪ್ರಮಾಣ ವಚನ ಸ್ವೀಕರಿಸಿದರು.
ರೇಖಾ ಗುಪ್ತ ಈ ಮೊದಲು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿದ್ದರು. ಇದೀಗ ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿ ಹಾಗೂ ಬಿಜೆಪಿ ಪಕ್ಷದಿಂದ ಆಯ್ಕೆಯಾದ ಎರಡನೇ ಮಹಿಳಾ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ. ಈ ಮೊದಲು ಬಿಜೆಪಿಯಿಂದ ಸುಷ್ಮಾ ಸ್ವರಾಜ್, ಕಾಂಗ್ರೆಸ್ ಪಕ್ಷದಿಂದ ಶೀಲಾ ದೀಕ್ಷಿತ್, ಆಮ್ ಆದ್ಮಿ ಪಕ್ಷದಿಂದ ಅತಿಶಿ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದ್ದರು.
0 Comments