ರಾಜ್ಯಾದ್ಯಂತ ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಹಾಗೆಯೇ ಮಾರ್ಚ್ 21ರಿಂದ ಏಪ್ರಿಲ್ 4 ರವರೆಗೆ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಕೆ.ಎಸ್.ಆರ್.ಟಿ.ಸಿ ಯು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ಉಚಿತ ಬಸ್ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಿದೆ.
ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಬರುವಾಗ ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
0 Comments