ವರ್ಷದಿಂದ ವರ್ಷಕ್ಕೆ ಕ್ಯಾನ್ಸರ್ ರೋಗ ಹೆಚ್ಚುತ್ತಲೇ ಇದೆ. ಕಳೆದ ನಾಲ್ಕು ವರ್ಷದ ಅವಧಿಯಲ್ಲಿ 3 ಲಕ್ಷಕ್ಕೂ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿದ್ದು, ಈ ಆತಂಕಕಾರಿ ಬೆಳವಣಿಗೆಯ ನಡುವೆ ಇಡ್ಲಿಗೆ ಬಳಸುವ ಬಟರ್ ಪೇಪರ್ ನಲ್ಲಿ ಕ್ಯಾನ್ಸರ್ ಕಾರಕ ಅಂಶವಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ.
ಕರ್ನಾಟಕದ ಆರೋಗ್ಯ ಇಲಾಖೆಯು ನಡೆಸಿದ ತಪಾಸಣೆಯಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಮೂರು ಕೋಟಿಗೂ ಹೆಚ್ಚು ಜನರನ್ನು ಪರೀಕ್ಷಿಸಲಾಗಿದ್ದು ಇದರಲ್ಲಿ 3.06 ಲಕ್ಷ ಮಂದಿಯಲ್ಲಿ ಸ್ತನ, ಬಾಯಿ ಮತ್ತು ಗರ್ಭಕಂಠದ ಕ್ಯಾನ್ಸರ್ ಸಂಶಯ ವ್ಯಕ್ತವಾಗಿದೆ. 14,486 ಮಂದಿಯಲ್ಲಿ ರೋಗ ದೃಢ ಪಟ್ಟಿರುವುದು ಆತಂಕಕಾರಿಯಾಗಿದೆ.
ಇಡ್ಲಿ ತಯಾರಿಕೆಗೆ ಬಳಸುವಂತಹ ಪ್ಲಾಸ್ಟಿಕ್ ನಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ಆಹಾರ ಇಲಾಖೆಯು ವರದಿಯಲ್ಲಿ ಬಜರಂಗಪಡಿಸಿದೆ. ಇಡ್ಲಿಗೆ ಬಳಸುವ ಪ್ಲಾಸ್ಟಿಕ್ ನಲ್ಲಿ ಕ್ಯಾನ್ಸರ್ ಕಾರಕ ಅಂಶವಿದೆ ಎಂದು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ನಡೆಸಿದ ಪರೀಕ್ಷೆಯಿಂದ ದೃಢಪಟ್ಟಿದೆ. ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ ಎಂದು ಸಾರ್ವಜನಿಕರಿಂದ ಸಾಲು ಸಾಲು ದೂರುಗಳು ಬಂದಿದ್ದವು. ದೂರು ಬಂದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ಸುಮಾರು 500 ಆಹಾರ ಮಳಿಗೆಗಳ ಮೇಲೆ ದಾಳಿ ನಡೆಸಿತ್ತು. ಈ ವೇಳೆ 35 ಕಡೆ ಪ್ಲಾಸ್ಟಿಕ್ ಬಳಕೆ ಮಾಡಿರುವುದು ಪತ್ತೆಯಾಗಿತ್ತು. ಈ ಬೆನ್ನಲ್ಲೇ 35 ಮಳಿಗೆದಾರರಿಗೆ ನೋಟಿಸ್ ನೀಡಲಾಗಿತ್ತು. ಅಲ್ಲದೆ 500 ಕಡೆಗಳಲ್ಲಿ ಸಂಗ್ರಹಿಸಿದ್ದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರಲ್ಲಿ 35 ಮಳಿಗೆಗಳ ಇಡ್ಲಿ ಮಾದರಿಗಳು ಡೇಂಜರ್ ಅಂತ ವರದಿ ಬಂದಿದೆ. ಇಡ್ಲಿ ತಯಾರಿಕೆಗೆ ಅಥವಾ ಬಳಕೆಗೆ ಬಳಸುವ ಪ್ಲಾಸ್ಟಿಕ್ ನಲ್ಲಿ ಶಾಖ ಹೆಚ್ಚಾದಂತೆ ಪಿ.ಎಫ್.ಎ.ಎಸ್ ಕೆಮಿಕಲ್ ಎಂಬ ಹಾನಿಕಾರಕ ಅಂಶ ಹೊರಸುಸುತ್ತದೆ ಎಂದು ವರದಿಯಲ್ಲಿ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಆಹಾರ ತಯಾರಿಕೆಗೆ ಬಳಸುವ ಈ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗಿದೆ.
0 Comments