ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಸಾಂಸ್ಕೃತಿಕ ಯೋಜನೆಯಡಿ ಉಚಿತ ಶಿಕ್ಷಣ

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ವಿದ್ಯಾ ಗಿರಿಯಲ್ಲಿ ಕಾರ್ಯಾಚರಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಸಾಂಸ್ಕೃತಿಕ ಯೋಜನೆಯಡಿ ಉಚಿತ ಶಿಕ್ಷಣವನ್ನು ನೀಡುತ್ತಿದ್ದು ಅರ್ಹ ಮತ್ತು ಆಸಕ್ತ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2025-26 ನೇ ಸಾಲಿನಲ್ಲಿ ಆಳ್ವಾಸ್ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಮತ್ತು ಕಲಾ ವಿಭಾಗ, ಪದವಿ ಕೋರ್ಸ್ ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ಕೆಳಕಂಡ ಸಾಂಸ್ಕೃತಿಕ ಕ್ಷೇತ್ರದಲ್ಲಿ ಪ್ರತಿಭಾ ಕಾರಂಜಿ, ವಿಶ್ವವಿದ್ಯಾನಿಲಯ, ರಾಜ್ಯ ಮತ್ತು ರಾಷ್ಟ್ರಮಟ್ಟದ ಸಾಧನೆಗೈದು ದಾಖಲೆ ನಿರ್ಮಿಸಿರುವ ಹಾಗೂ ಜೂನಿಯರ್, ಸೀನಿಯರ್, ವಿದ್ವತ್ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಅವಕಾಶವನ್ನು ಕಲ್ಪಿಸಲಾಗಿದೆ. 

ಸಾಂಸ್ಕೃತಿಕ ಕ್ಷೇತ್ರಗಳಾದ ಕರ್ನಾಟಕ ಮತ್ತು ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ, ಯಕ್ಷಗಾನ, ನಾಟಕ, ಜಾನಪದ ನೃತ್ಯ, ಶಾಸ್ತ್ರೀಯ ನೃತ್ಯ, ಪಕ್ಕ ವಾದ್ಯ ಈ ಆರು ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಪ್ರತಿಭಾವಂತ ವಿದ್ಯಾರ್ಥಿಗಳು ಸಾಂಸ್ಕೃತಿಕ ಯೋಜನೆಯಡಿ ಉಚಿತ ಶಿಕ್ಷಣ ಪಡೆಯಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ 9480529236, 8971161797 ಸಂಖ್ಯೆಗಳನ್ನು ಸಂಪರ್ಕಿಸಬಹುದು.

Post a Comment

0 Comments