2025-26ನೇ ಶೈಕ್ಷಣಿಕ ಸಾಲಿನಲ್ಲಿ ಆಳ್ವಾಸ್ ಹಿರಿಯ ಪ್ರಾಥಮಿಕ, ಪ್ರೌಢಶಾಲೆ (ಕನ್ನಡ, ಇಂಗ್ಲಿಷ್ ಮಾಧ್ಯಮ ಮತ್ತು ಸಿ.ಬಿ.ಎಸ್.ಸಿ) ಪದವಿ ಪೂರ್ವ, ಪದವಿ ಹಾಗೂ ಉನ್ನತ ವ್ಯಾಸಂಗದ ತರಗತಿಗಳಿಗೆ ದಾಖಲಾತಿ ಬಯಸುವ, ಕ್ರೀಡಾ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಹಾಗೂ ಮಾಡಲಿಚ್ಛಿಸುವ ಕ್ರೀಡಾಪಟುಗಳು ಕೂಡಲೇ ತಮ್ಮ ಕ್ರೀಡಾ ಸಾಧನೆಯ ದಾಖಲೆ, ಪೂರ್ಣ ವಿಳಾಸ, ದೂರವಾಣಿ ಸಂಖ್ಯೆ, ಭಾವಚಿತ್ರ ಸಹಿತ ಸ್ವ ವಿವರಗಳುಳ್ಳ ಅರ್ಜಿಯನ್ನು "ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.), ಮೂಡಬಿದಿರೆ, ದಕ್ಷಿಣ ಕನ್ನಡ:-574227" ವಿಳಾಸಕ್ಕೆ ದಿನಾಂಕ 25-03.2025 ರ ಒಳಗೆ ಸಲ್ಲಿಸುವಂತೆ ವಿನಂತಿಸಲಾಗಿದೆ.
ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಥ್ಲೆಟಿಕ್ಸ್ ಮತ್ತು ಗುಂಪು ಆಟಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಹಾಗೆಯೇ ಪಿಯುಸಿ ವಿದ್ಯಾರ್ಥಿಗಳಿಗೆ ಅಥ್ಲೆಟಿಕ್ಸ್, ಕಬಡ್ಡಿ, ಖೋಖೋ, ವಾಲಿಬಾಲ್, ಕುಸ್ತಿ, ಬಾಲ್ ಬ್ಯಾಡ್ಮಿಂಟನ್, ಈಜು, ವೆಯಿಟ್ ಲಿಫ್ಟಿಂಗ್, ಶೆಟಲ್ ಬ್ಯಾಡ್ಮಿಂಟನ್ ಕ್ರೀಡಾ ವಿಭಾಗಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಪದವಿ ಮತ್ತು ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಗೆ ಅಥ್ಲೆಟಿಕ್ಸ್, ಕಬಡ್ಡಿ, ಖೋಖೋ ,ವೈಟ್ ಲಿಫ್ಟಿಂಗ್, ವಾಲಿಬಾಲ್, ಹ್ಯಾಂಡ್ ಬಾಲ್, ಸಾಫ್ಟ್ ಬಾಲ್, ತ್ರೋ ಬಾಲ್, ಬಾಲ್ ಬ್ಯಾಡ್ಮಿಂಟನ್, ಈಜು, ಶಟಲ್ ಬ್ಯಾಡ್ಮಿಂಟನ್ ವಿಭಾಗಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಮೋಹನ್ ಆಳ್ವಾ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ 9620387666, 8073037640, 9742109257 ಸಂಪರ್ಕಿಸಬಹುದಾಗಿದೆ.
0 Comments