ಕರ್ನಾಟಕದ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ವಿತರಿಸುತ್ತಿದ್ದ “ಚಿಕ್ಕಿ”ಯನ್ನು ನಿಷೇಧಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಈ ಚಿಕ್ಕಿ ಎಂಬ ಸಿಹಿ ಪದಾರ್ಥದಲ್ಲಿ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಅಂಶಗಳು ಕಂಡು ಬಂದ ಹಿನ್ನೆಲೆಯಲ್ಲಿ ವಿತರಣೆಯನ್ನು ಸ್ಥಗಿತಗೊಳಿಸಲಾಗಿದೆ.
1 ರಿಂದ 10ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ ರೂಪದಲ್ಲಿ ವಿತರಿಸಲಾಗುತ್ತಿರುವ ಚಿಕ್ಕಿಯಲ್ಲಿ ಆರೋಗ್ಯಕ್ಕೆ ಹಾನಿ ಉಂಟುಮಾಡುವ ಅಪರ್ಯಾಪ್ತ ಕೊಬ್ಬಿನ ಅಂಶ ಅಥವಾ ಅನ್ಸಾಚುರೇಟೆಡ್ ಫ್ಯಾಟ್ ಹೆಚ್ಚಿನ ಪ್ರಮಾಣದಲ್ಲಿದ್ದು, ಸಕ್ಕರೆಯ ಅಂಶ ಕೂಡ ಅಧಿಕವಾಗಿದೆ. ಹಾಗೆಯೇ ಚಿಕ್ಕಿಯನ್ನು ಸರಿಯಾಗಿ ಸಂಗ್ರಹಿಸದೇ ಇದ್ದಲ್ಲಿ ಕಲುಷಿತವಾಗಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ಇರುವುದರಿಂದ ವಿತರಣೆಯನ್ನು ಸ್ಥಗಿತಗೊಳಿಸಿ ಮಕ್ಕಳಿಗೆ ಮೊಟ್ಟೆ ಅಥವಾ ಬಾಳೆಹಣ್ಣನ್ನು ವಿತರಿಸಲು ಸೂಚಿಸಲಾಗಿದೆ.
0 Comments