ಉತ್ತರ ಪ್ರದೇಶದ ಪ್ರಯಾಗ್ ರಾಜ್ 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳಕ್ಕೆ ಈ ವರ್ಷ ಸಾಕ್ಷಿಯಾಗಿದೆ. ಐಈ ಪವಿತ್ರ ಧಾರ್ಮಿಕ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳುವುದೇ ನಮ್ಮೆಲ್ಲರ ಸೌಭಾಗ್ಯ. ಈ ಪವಿತ್ರ ಆಚರಣೆಯ ಸಂದರ್ಭದಲ್ಲಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡುವುದು ಶ್ರೇಷ್ಠ ಯೋಗವೇ ಸರಿ. ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಬೆಳಗ್ಗೆ ಪುಣ್ಯ ಸಂಗಮದಲ್ಲಿ ಮಿಂದೆದ್ದಿದ್ದಾರೆ.
ಕೇಸರಿ ಬಟ್ಟೆ ಧರಿಸಿ ಕೈಯಲ್ಲಿ ರುದ್ರಾಕ್ಷಿ ಮಾಲೆ ಹಿಡಿದು ಮಂತ್ರಿ ಜಪಿಸುತ್ತಾ ತ್ರಿವೇಣಿ ಸಂಗಮದಲ್ಲಿ ಪ್ರಧಾನಿ ಪ್ರಾರ್ಥನೆ ಸಲ್ಲಿಸಿದರು. ಜನವರಿ 13ರಿಂದ ಆರಂಭವಾಗಿರುವ ಈ ಮಹಾ ಕುಂಭಮೇಳದಲ್ಲಿ ಸುಮಾರು 14 ಕೋಟಿಗೂ ಅಧಿಕ ಭಕ್ತರು ಪಾಲ್ಗೊಂಡಿದ್ದು ಪುಣ್ಯ ನೀರಿನಲ್ಲಿ ಸ್ನಾನಗೈದಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೂ ಹಾಜರಿದ್ದರು.
0 Comments