ಭಾರತದ ಮೊದಲ ಹೈಡ್ರೋಜನ್ ರೈಲನ್ನು ಅಭಿವೃದ್ಧಿ ಪಡಿಸಲು ಭಾರತೀಯ ರೈಲ್ವೆ ಇಲಾಖೆ ಅತ್ಯಾಧುನಿಕ ಯೋಜನೆಯನ್ನು ಕೈಗೆತ್ತಿಕೊಂಡಿದೆ.
ಭಾರತದ ಈ ಹೈಡ್ರೋಜನ್ ರೈಲು ವಿಶ್ವದ ಅತಿ ಉದ್ದದ ಹಾಗೂ ಗರಿಷ್ಠ ಸಾಮರ್ಥ್ಯದ ಹೈಡ್ರೋಜನ್ ರೈಲುಗಳಲ್ಲಿ ಒಂದಾಗಿರಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜ್ಯಸಭೆಗೆ ಲಿಖಿತ ಉತ್ತರದ ಮೂಲಕ ತಿಳಿಸಿದ್ದಾರೆ. ಈ ರೈಲನ್ನು ಸಂಪೂರ್ಣವಾಗಿ ದೇಶೀಯವಾಗಿ ಅಭಿವೃದ್ಧಿ ಪಡಿಸಲಾಗಿದ್ದು “ರಿಸರ್ಚ್ ಡಿಸೈನ್ ಮತ್ತು ಸ್ಟ್ಯಾಂಡರ್ಡ್ ಆರ್ಗನೈಜೇಷನ್(ಆರ್.ಡಿ.ಎಸ್.ಒ)” ಸಿದ್ದಪಡಿಸಿದೆ ಎಂದು ಅಶ್ವಿನಿ ವೈಷ್ಣವ್ ಅವರು ಮಾಹಿತಿ ನೀಡಿದ್ದಾರೆ.
0 Comments