ಕೆ.ಪಿ.ಎಸ್.ಸಿ ಪರೀಕ್ಷೆಗಳಿಗಿನ್ನು ನೀಲಿ ಬಾಲ್ ಪಾಯಿಂಟ್ ಪೆನ್ ಬಳಸುವಂತೆ ಸೂಚನೆ

ಕರ್ನಾಟಕ ಲೋಕಸೇವಾ ಆಯೋಗವು ಪ್ರಸ್ತುತ ನಡೆಸುತ್ತಿರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳಿಗೆ ಕಪ್ಪು ಬಾಲ್ ಪಾಯಿಂಟ್ ಪೆನ್ (Black Ball Point Pen) ಬಳಸಿ ಪರೀಕ್ಷೆ ಬರೆಯುವಂತೆ ಸೂಚನೆ ನೀಡಲಾಗಿತ್ತು.  


ಸದರಿ ಸೂಚನೆಯನ್ನು ಮಾರ್ಪಡಿಸಲಾಗಿದ್ದು, ದಿನಾಂಕ 16.2.2025 ರಿಂದ ಆಯೋಗವು ನಡೆಸುವ ಮುಂದಿನ ಎಲ್ಲಾ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಬರೆಯಲು ಕಪ್ಪು ಬಾಲ್ ಪೆನ್ ಬದಲು ಕಡ್ಡಾಯವಾಗಿ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ನು (Blue Ball Point Pen)ಗಳನ್ನು ಬಳಸುವಂತೆ ಈ ಮೂಲಕ ಅಭ್ಯರ್ಥಿಗಳಿಗೆ ಮಾಹಿತಿಯನ್ನು ಪ್ರಕಟಿಸಲಾಗಿದೆ ಎಂದು ಟಿ. ಪ್ರಕಾಶ್, ಸಹಾಯಕ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ ಇವರು ಕಾರ್ಯದರ್ಶಿಯವರ ಆದೇಶದ ಮೇರೆಗೆ ಪ್ರಕಟಣೆಯನ್ನು ಹೊರಡಿಸಿದ್ದಾರೆ.


Post a Comment

0 Comments