ಎನ್.ಎ.ಎಲ್ ನಲ್ಲಿ ವಿಜ್ಞಾನಿ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರಿನ ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರಿಯು ಸೈಂಟಿಸ್ಟ್ ಗಳ ನೇಮಕಾತಿ ಮಾಡಿಕೊಳ್ಳಲಿದೆ. ಒಟ್ಟು 30 ವಿಜ್ಞಾನಿ ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 3 ಕೊನೆಯ ದಿನವಾಗಿರುತ್ತದೆ.
ಎಂ.ಇ/ಎಂ.ಟೆಕ್ ಅಥವಾ ಪಿಹೆಚ್.ಡಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಮೆಕ್ಯಾನಿಕಲ್, ಕೆಮಿಸ್ಟ್ರಿ, ಮೆಟೀರಿಯಲ್ ಸೈನ್ಸ್, ಮೆಟಲರ್ಜಿಕಲ್ ಇಂಜಿನಿಯರಿಂಗ್, ಪಾಲಿಮರ್ ಕೆಮಿಸ್ಟ್ರಿ, ಮೆಟೀರಿಯಲ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್, ಮಷೀನ್ ಡಿಸೈನ್, ಪ್ರೊಡಕ್ಷನ್, ಏರೋಸ್ಪೇಸ್ ಇಂಜಿನಿಯರಿಂಗ್ ಮತ್ತು ಇಂಡಸ್ಟ್ರಿಯಲ್ ಇಂಜಿನಿಯರಿಂಗ್ ಸೇರಿದಂತೆ ವಿವಿಧ ವಿಷಯಗಳಲ್ಲಿ ನಿಗದಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. 

32 ವರ್ಷದೊಳಗಿನ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಈ ಹುದ್ದೆಗಳಿಗೆ ತಿಂಗಳಿಗೆ 62,700 ರಿಂದ 2,08,700 ರೂಪಾಯಿ ವೇತನ ನೀಡಲಾಗುವುದು ಎಂದು ಎನ್.ಎ.ಎಲ್ ಪ್ರಕಟಣೆಯಲ್ಲಿ ತಿಳಿಸಿದೆ. ಒಟ್ಟು 30 ಹುದ್ದೆಗಳು ಖಾಲಿ ಇದ್ದು, ಬೆಂಗಳೂರು ಕಾರ್ಯನಿರ್ವಹಣಾ ಸ್ಥಳವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ https://nal.res.in ಗೆ ಭೇಟಿ ನೀಡಿ ಪರಿಶೀಲಿಸಬಹುದಾಗಿದೆ.

Post a Comment

0 Comments