ಎಸ್.ಬಿ.ಐ ನಲ್ಲಿ ಸಲಹೆಗಾರರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌.ಬಿ.ಐ) 2 ವರ್ಷದ ಅವಧಿಗಾಗಿ ಗುತ್ತಿಗೆ ಆಧಾರದ ಮೇಲೆ ಬೆಂಗಳೂರು ತಿರುವನಂತಪುರಂನಲ್ಲಿ ಸರ್ಕಲ್ ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. 
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 60 ವರ್ಷ ವಯಸ್ಸಿನೊಳಗಿನವರಾಗಿರಬೇಕು. ಎಸ್ಸಿ/ಎಸ್ಟಿ/ ಅಂಗವಿಕಲ ವರ್ಗದ ಅಭ್ಯರ್ಥಿಗಳನ್ನು ಹೊರತುಪಡಿಸಿ, ಸಾಮಾನ್ಯ/ಓಬಿಸಿ/ಇಡಬ್ಲ್ಯೂಎಸ್ ಅಭ್ಯರ್ಥಿಗಳು 750 ರೂ. ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು. ಈ ಹುದ್ದೆಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವಾರ್ಷಿಕ 26.95 ಲಕ್ಷ ರೂಪಾಯಿ ವೇತನವನ್ನು ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಮತ್ತು ಶುಲ್ಕವನ್ನು ಮಾರ್ಚ್ 2ರ  ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಎಸ್.ಬಿ.ಐ ವೆಬ್ಸೈಟ್ SBI.co.in, ಅಧಿಸೂಚನೆಗಾಗಿ https://bit.ly/3WXz4Eh ಅನ್ನು ಪರಿಶೀಲಿಸಬಹುದಾಗಿದೆ.

Post a Comment

0 Comments