ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಕರ್ನಾಟಕ ರಾಜ್ಯದ ವಸತಿ ಶಾಲೆಗಳಲ್ಲಿ ನೇರ ಪ್ರವೇಶಾತಿಗೆ ಅವಕಾಶ ಕಲ್ಪಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಹೆತ್ತವರಿಲ್ಲದೆ ಅನಾಥರಾಗಿರುವ ಮಕ್ಕಳನ್ನು ದೀಕ್ಷಾತನೆ ಮತ್ತು ಇತರೆ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಬರುವ ಎಲ್ಲಾ ವಸತಿ ಶಾಲೆಗಳಿಗೆ ಆರನೇ ತರಗತಿಗೆ ಅನಾಥ ಮಕ್ಕಳಿಗೆ ನೇರ ಪ್ರವೇಶಾತಿ ಕಲ್ಪಿಸಲು ಕೂಡಲೇ ಅಗತ್ಯ ಕ್ರಮವಹಿಸುವಂತೆ ತಿಳಿಸಿ ಸರ್ಕಾರದ ಉಪ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಇವರು ಸುತ್ತೋಲೆಯನ್ನು ಹೊರಡಿಸಿದ್ದಾರೆ.
0 Comments