ಶಾಲಾ ಬಿಸಿಯೂಟದಲ್ಲಿ ಅಡುಗೆ ಎಣ್ಣೆ ಬಳಕೆ ಶೇ. 10 ಕಡಿತ!!

ಭಾರತೀಯರಲ್ಲಿ ಹೆಚ್ಚುತ್ತಿರುವ ಬೊಜ್ಜಿನ ಸಮಸ್ಯೆಯು ಅವರ ಆರೋಗ್ಯದ ಮೇಲೆ ದುಷ್ಪರಿಣಾಮವನ್ನು ಉಂಟು ಮಾಡುತ್ತಿದ್ದು ಈ ಕಾರಣದಿಂದ ಅಡುಗೆ ಎಣ್ಣೆಯ ಬಳಕೆಯನ್ನು ಶೇಕಡ 10ರಷ್ಟು ಕಡಿಮೆ ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಲಹೆಗೆ ಓಗೊಟ್ಟು ಶಾಲಾ ಬಿಸಿಯೂಟದಲ್ಲಿ ಅಡುಗೆ ಎಣ್ಣೆ ಕಡಿತದ ಕುರಿತು ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.
ಪಿಎಂ ಪೋಶಣ್ ಯೋಜನೆಯಡಿ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟಕ್ಕೆ ಸೂರ್ಯಕಾಂತಿ ಎಣ್ಣೆಯನ್ನು ಬಳಸಲಾಗುತ್ತಿದೆ. ಈ ಎಣ್ಣೆಯ ಬಳಕೆ ಪ್ರಮಾಣವನ್ನು ಶೇಕಡಾ ಹತ್ತರಷ್ಟು ಕಡಿಮೆ ಮಾಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರಾದ ಕೆವಿ ತ್ರಿಲೋಕಚಂದ್ರ ಸೂಚನೆ ನೀಡಿದ್ದಾರೆ.

ಭಾರತದಲ್ಲಿ ಪ್ರಸ್ತುತ ಎಲ್ಲರನ್ನೂ ಕಾಡುವ ಬಹುದೊಡ್ಡ ಸಮಸ್ಯೆ ಎಂದರೆ ಬೊಜ್ಜು. ಬೊಜ್ಜಿನ ಸಮಸ್ಯೆಯೆಂಬುದು ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಅನಿಯಮಿತ ತೂಕ ಸಮಸ್ಯೆ ಕಾಡುತ್ತಿದೆ. ಆದ್ದರಿಂದ ಶಾಲಾ ಮಕ್ಕಳಲ್ಲಿ ಆರೋಗ್ಯಕರ ಜೀವನ ಶೈಲಿಯನ್ನು ಉತ್ತೇಜಿಸಲು ಮತ್ತು ದೈನಂದಿನ ಊಟದಲ್ಲಿ ನಿಯಮಿತ ಅಡುಗೆಯನ್ನೇ ಬಳಕೆ ಬಗ್ಗೆ 
ಜಾಗೃತಿ ಮೂಡಿಸುವ ಅಗತ್ಯವಿದೆ. ಕಡಿಮೆ ಅಡುಗೆ ಎಣ್ಣೆ ಬಳಸಿ ತಾಜಾ ಹಾಗೂ ಪೌಷ್ಟಿಕಾಂಶಯುಕ್ತ ಬಿಸಿ ಊಟವನ್ನು ತಯಾರಿಸಲು ಹಾಗೂ ಸೇವಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಅಡುಗೆ ಎಣ್ಣೆಯ ಬಳಕೆಯನ್ನು ಕಡಿಮೆಗೊಳಿಸಿ ಬಿಸಿಯುಟ ತಯಾರಿಸುವ ಬಗ್ಗೆ ಅಡುಗೆ ಸಿಬ್ಬಂದಿಗಳಿಗೆ ಕಡ್ಡಾಯವಾಗಿ ತರಬೇತಿ ನೀಡಬೇಕು. ಆರೋಗ್ಯ ಸಂಸ್ಥೆಗಳು ಮತ್ತು ಗ್ರಹವಿಜ್ಞಾನ ಕಾಲೇಜುಗಳ ಪೌಷ್ಟಿಕ ಆಹಾರ ತಜ್ಞರನ್ನು ಆಹ್ವಾನಿಸಿ ಕಡಿಮೆ ಎಣ್ಣೆ ಬಳಸಿ ತಯಾರಿಸಬಹುದಾದ ಪಾಕವಿಧಾನವನ್ನು ಎಲ್ಲರಿಗೂ ತಲುಪಿಸಬೇಕು. ಅಷ್ಟೇ ಅಲ್ಲದೆ ಆರೋಗ್ಯಕರ ಆಹಾರ ಪದ್ಧತಿಯ ಬಗ್ಗೆ ಶಾಲಾ ಮಟ್ಟದಲ್ಲಿ ರಸಪ್ರಶ್ನೆ ಆಯೋಜಿಸಿ ಬಹುಮಾನ ವಿತರಿಸಬೇಕು. ಶಾಲೆಗಳಲ್ಲಿ ವ್ಯಾಯಾಮ ಯೋಗ ಮತ್ತು ಕ್ರೀಡಾ ಚಟುವಟಿಕೆಗಳನ್ನು ನಿಯಮಿತವಾಗಿ ಆಯೋಜಿಸಬೇಕು ಎಂದು ಸೂಚಿಸಲಾಗಿದೆ. 

ಶಾಲೆಗಳಲ್ಲಿ ಅಥವಾ ಮನೆಗಳಲ್ಲಿ ದೀಪ್ ಫ್ರೈ ಮಾಡುವ ಬದಲು ಹಬೆಯಲ್ಲಿ ಬೇಯಿಸಬೇಕು. ಸಂಸ್ಕರಿಸಿದ ಆಹಾರವನ್ನು ಮತ್ತು ಜಂಕ್ ಫುಡ್ಸ್ ಅನಾರೋಗ್ಯಕರ ಕೊಬ್ಬು ಹೊಂದಿದ್ದು ಇಂತಹ ಆಹಾರಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಆಯುಕ್ತರು ಜ್ನ್ಯಾಪನ ಪತ್ರದಲ್ಲಿ ವಿವರಿಸಿದ್ದಾರೆ.

Post a Comment

0 Comments