ಕರಾವಳಿ ಸೇರಿದಂತೆ ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!!

ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ ಒಟ್ಟು 11 ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಹಾವೇರಿ, ಧಾರವಾಡ, ಗದಗ, ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ.
ಇತರ ಜಿಲ್ಲೆಗಳಾದ ಬೀದರ್, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ವಿಜಯಪುರ, ರಾಯಚೂರು, ಬಳ್ಳಾರಿ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ಮೈಸೂರು, ಮಂಡ್ಯ, ರಾಮನಗರ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Post a Comment

0 Comments