ಬಿಜೆಪಿಯ ಡಿಎಸ್ ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗ್ಯಾಸ್ ಪೂರೈಕೆ ಕೊಳವೆ ಅಳವಡಿಕೆಗೆ ನಗರ ಅನಿಲ ಸರಬರಾಜು ನೀತಿ ಪ್ರಕಾರ ಮೀಟರ್ ಗೆ ಒಂದು ರೂಪಾಯಿ ನಿಗದಿಪಡಿಸಲಾಗಿದೆ. ರಾಜ್ಯದಲ್ಲಿ ಒಟ್ಟು 66.25 ಲಕ್ಷ ಮನೆಗಳಿಗೆ ಸಂಪರ್ಕ ಕಲ್ಪಿಸುವ ಮತ್ತು 1022 ಸಿ.ಎನ್.ಜಿ ಮರುಪೂರಣ ಕೇಂದ್ರ ತೆರೆಯುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಹೇಳಿದರು. 2015ರಲ್ಲೇ ಈ ಯೋಜನೆ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಭಾರತೀಯ ಅನಿಲ ಪ್ರಾಧಿಕಾರ (ಗೈಲ್) ಇದರ ಕಾಮಗಾರಿಯನ್ನು ಕೈಗೆತ್ತಿಕೊಂಡಿತ್ತು. 2023 ವರೆಗೆ 4.07 ಲಕ್ಷ ಮನೆಗಳಿಗೆ ಗ್ಯಾಸ್ ಸಂಪರ್ಕ ಕೊಟ್ಟಿದ್ದು, 320 ಸಿ.ಎನ್.ಜಿ ಕೇಂದ್ರಗಳನ್ನು ತೆರೆಯಲಾಗಿದೆ. ಇದಕ್ಕೆ ಹೊಸ ನೀತಿ ರೂಪಿಸಿದ ನಂತರ ಇನ್ನೂ1.01 ಲಕ್ಷ ಮನೆಗಳಿಗೆ ಈ ಅನುಕೂಲವನ್ನು ಒದಗಿಸಿದ್ದು, 154 ಸಿ.ಎನ್.ಜಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಈಗ ಮತ್ತಷ್ಟು ಬೇಗ ನೀಡಲು ಸ್ಥಳೀಯ ನಗರ ಸಂಸ್ಥೆಗಳ ಜೊತೆಗೂ ಸಮನ್ವಯ ಸಭೆಗಳನ್ನು ನಡೆಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.
0 Comments