ರಾಜ್ಯದ್ಯಂತ ಒಟ್ಟು 1500 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ, 1000 ಅಂಗನವಾಡಿ ಸಹಾಯಕಿಯರ ಹುದ್ದೆ ಖಾಲಿ ಇದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 19 ವರ್ಷದಿಂದ ಗರಿಷ್ಠ 35 ವರ್ಷದೊಳಗಿನವರಾಗಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋ ಸಡಿಲಿಕೆ ಅನ್ವಯವಾಗಲಿದೆ.
ಅಭ್ಯರ್ಥಿಗಳನ್ನು ಹುದ್ದೆಗೆ ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕ ಮತ್ತು ಮೆರಿಟ್ ಪಟ್ಟಿ ಆಧರಿಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅಭ್ಯರ್ಥಿಗಳು ಪಿಯುಸಿ ಪೂರ್ಣಗೊಳಿಸಿದವರಾಗಿರಬೇಕು. ಕನ್ನಡ ವಿಷಯ ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಓದಿರಬೇಕು. ಸರ್ಕಾರದ ಅಂಗೀಕೃತ ಸಂಸ್ಥೆಯಿಂದ ಡಿಎಸ್ಇಆರ್‌ಟಿಯಿಂದ ಇಸಿಸಿಇ ಡಿಪ್ಲೋಮಾ ಕೋರ್ಸ್, ಜೆಒಸಿ ಕೋರ್ಸ್, ಎನ್‌ಟಿಟಿ ಕೋರ್ಸ್ ಅಥವಾ ಅಂಗನವಾಡಿ ಚಟುವಟಿಕೆಗೆ ಸಂಬಂಧಿಸಿದಂತೆ ಡಿಪ್ಲೋಮಾ ನ್ಯೂಟ್ರಿಷಿಯನ್, ಹೋಮ್ ಸೈನ್ಸ್ ಪ್ರಮಾಣ ಪತ್ರ, ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದ ಪ್ರಮಾಣ ಪತ್ರ ಹೊಂದಿದವರಿಗೆ ಆದ್ಯತೆ ಮತ್ತು 5 ಅಂಕ ಬೋನಸ್ ನೀಡಲಾಗುವುದು. ಸಹಾಯಕ್ಕೆ ಹುದ್ದೆಗೆ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸ ಪೂರ್ಣಗೊಳಿಸಿದವರಾಗಿರಬೇಕು.
ಅರ್ಹ ಅಭ್ಯರ್ಥಿಗಳು karnemakaone.kar.nic.in ವೆಬ್ಸೈಟ್ಗೆ ಭೇಟಿ ಇಡುವ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕ ಇರುವ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ನಿಗದಿತ ವಿದ್ಯಾರ್ಹತೆಗಳ ಅಂಕಪಟ್ಟಿ, ತಹಶಿಲ್ದಾರ್ ಅಥವಾ ಉಪ ತಹಶೀಲ್ದಾರ್ ಅವರಿಂದ ಪಡೆದ ಮೂರು ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ ಸೇರಿ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.
ಈ ಬಗ್ಗೆ ಹೊರಡಿಸಲಾದ ಅಧಿ ಸೂಚನೆಯನ್ನು tinyurl.com/bdff96n ಅಲ್ಲಿ ಪರಿಶೀಲಿಸಬಹುದು.
0 Comments