ಹೀಗಾಗಿ ಮಂಗಳೂರು ನಗರದಿಂದ ತಲಪಾಡಿ ಕಡೆಗೆ ಹೋಗುವ ಒಂದು ಸೇತುವೆಯಲ್ಲಿ ವಾಹನಗಳ ಸಂಚಾರಕ್ಕಾಗಿ ದ್ವಿಮುಖ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ. ಇದರಿಂದ ಪಂಪ್ವೆಲ್ ಇಂದ ತೊಕ್ಕೊಟ್ಟುವರೆಗೆ ಸದ್ರಿ ಹೆದ್ದಾರಿಯ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಳವಾಗಿರುತ್ತದೆ.
ಆದ್ದರಿಂದ ಹಳೆಯ ನೇತ್ರಾವತಿ ಸೇತುವೆಯಲ್ಲಿ ದುರಸ್ತಿ ಕಾಮಗಾರಿ ನಡೆಯುವ ದಿನಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿದ್ದು, ನೇತ್ರಾವತಿ ಸೇತುವೆಯ ಮೂಲಕ ಸಂಚರಿಸುವ ಎಲ್ಲಾ ವಾಹನಗಳ ಚಾಲಕರು ಅಥವಾ ಸವಾರರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಚಲಿಸಬೇಕು. ಹಾಗೂ ಪೀಕ್ ಅವರ್ ಗಳಲ್ಲಿ ಸದರಿ ಮಾರ್ಗದಲ್ಲಿ ವಾಹನ ಸಂಚಾರವನ್ನು ತಪ್ಪಿಸಲು ಮನವಿ ಮಾಡಿದೆ.
ಈ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರಿಗಾಗಿ ಪರ್ಯಾಯ ಮಾರ್ಗಗಳು ಮಾರ್ಗಗಳು ಕೆಳಗಿನಂತಿವೆ:
1.ಮುಡಿಪು-ಕೊಣಾಜೆ-ದೇರಳಕಟ್ಟೆ ಕಡೆಯಿಂದ ಮಂಗಳೂರು ನಗರ ಕಡೆಗೆ ಲಘು ವಾಹನಗಳು/ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವ ಸ್ಥಳೀಯ ವಾಸಿಗಳು ಹರೇಕಳ(ಬ್ರಿಡ್ಜ್) ಅಡ್ಯಾರ್ ಮುಖಾಂತರ ಮಂಗಳೂರು ಕಡೆಗೆ ಸಂಚರಿಸಬಹುದಾಗಿದೆ.
2.ಮಂಗಳೂರು ಕಡೆಯಿಂದ ಕೊಣಾಜೆ-ಮುಡಿಪು-ದೇರಳಕಟ್ಟೆ ಕಡೆಗೆ ಸಂಚರಿಸುವ ಸ್ಥಳೀಯ ದ್ವಿ-ಚಕ್ರ / ಲಘು ವಾಹನಗಳು ಅಡ್ಯಾರ್-ಹರೇಕಳ(ಬ್ರಿಡ್) ಮುಖಾಂತರ ಸಂಚರಿಸಬಹುದಾಗಿದೆ.
3.ಉಳ್ಳಾಲ ಕಡೆಯಿಂದ ಬೆಂಗಳೂರು-ಉಪ್ಪಿನಂಗಡಿ-ಪುತ್ತೂರು-ಸುಳ್ಯ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟಿನಿಂದ ಬಲಕ್ಕೆ ತಿರುಗಿ ಮುಡಿಪು-ಬೋಳಿಯಾರ್-ಮೆಲ್ಕಾರ್ ಮೂಲಕ ಸಂಚರಿಸುವುದು.
4.ಬಿ.ಸಿ ರೋಡ್ ಕಡೆಯಿಂದ ತಲಪ್ಪಾಡಿ ಮತ್ತು ಕೇರಳ ಕಡೆಗೆ ಸಂಚರಿಸುವ ವಾಹನಗಳು ಮೆಲ್ಕಾರ್-ಮುಡಿಪು-ತೊಕ್ಕೊಟ್ಟು ಮುಖಾಂತರ ಸಂಚರಿಸುವುದು.
0 Comments