ಮತ್ತೆ 'ಕರೆಂಟ್ ಶಾಕ್' ನೀಡಿದ ರಾಜ್ಯ ಸರಕಾರ; ಪ್ರತಿ ಯೂನಿಟ್ಗೆ 36 ಪೈಸೆ ಹೆಚ್ಚಿದ ವಿದ್ಯುತ್ ದರ!!

ಕರ್ನಾಟಕದಲ್ಲಿ ಪಂಚ ಗ್ಯಾರೆಂಟಿ ಮೂಲಕ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುತ್ತಿರುವ ರಾಜ್ಯ ಸರಕಾರ ಈಗ ಮತ್ತೆ ವಿದ್ಯುತ್ ದರ ಏರಿಕೆ ಮಾಡಿದೆ‌. ರಾಜ್ಯದಲ್ಲಿ ವಿದ್ಯುತ್ ದರ ಪ್ರತೀ ಯೂನಿಟ್ ಗೆ 36 ಪೈಸೆ ಹೆಚ್ಚಳ ಮಾಡಿ ಕೆ.ಇ.ಆರ್.ಸಿ ಆದೇಶ ಹೊರಡಿಸಿದ್ದು, ಏಪ್ರಿಲ್ 1ನೇ ತಾರೀಕಿನಿಂದಲೇ ಜಾರಿಗೆ ಬರಲಿದೆ. 
ವಿದ್ಯುತ್ ಪ್ರಸರಣ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಣಿ ಗ್ರಾಚ್ಯುಟಿ ಹಣವನ್ನು ಗ್ರಾಹಕರಿಂದ ವಸೂಲಿಗೆ ಮುಂದಾಗಿರುವ ಕೆಇಆರ್‌ಸಿ ವಿದ್ಯುತ್ ದರವನ್ನು 36 ಪೈಸೆ ಹೆಚ್ಚಿಸಿದೆ. ಬೆಸ್ಕಾಂ, ಮೆಸ್ಕಾಂ, ಸೆಸ್ಕ್, ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಯಮಿತ, ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ಈ ವಿಭಾಗಗಳ ವಿದ್ಯುತ್ತರ ಹೆಚ್ಚಳವಾಗಲಿದೆ. 

ಮೆಟ್ರೋ ದರ ಹೆಚ್ಚಳದ ಬೆನ್ನಲ್ಲೇ ವಿದ್ಯುತ್ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಶಾಕ್ ನೀಡಿದೆ. ಈ ದರ ಏರಿಕೆಯಿಂದ ಮನೆ ಬೆಳಕದಾರರಿಗೆ, ಕೈಗಾರಿಕೆಗಳು ಹಾಗೂ ವ್ಯಾಪಾರಸ್ಥರಿಗೆ ಹೆಚ್ಚಿನ ಆರ್ಥಿಕ ಹೊರೆ ಬೀಳಲಿದೆ.

Post a Comment

0 Comments