ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ ನಾಲ್ಕು ರೂಪಾಯಿ ಹೆಚ್ಚಳ ಮಾಡಿ ಸಭೆಯಲ್ಲಿ ಅನುಮೋದನೆ ದೊರಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಅನುಮೋದನೆ ದೊರೆತಿದೆ.
ಪ್ರಸ್ತುತ ರಾಜ್ಯದಲ್ಲಿ ಅರ್ಧ ಲೀಟರ್ ಹೋಮೋಜಿನೆಸ್ಟ್ ಟೋನ್ಡ್ ಹಾಲಿನ ದರ 24ರೂ ಇದ್ದು ಇನ್ನು ಮುಂದೆ ಹೊಸ ದರ ಜಾರಿಗೆ ಬಂದರೆ 26 ರೂಪಾಯಿಗೆ ಏರಿಕೆಯಾಗಲಿದೆ. ಒಂದು ಲೀಟರ್ ಹೋಮೋಜಿನೆಸ್ಟ್ ಟೋನ್ಡ್ ಹಾಲಿನ ದರ 45 ರೂಪಾಯಿ ಇದ್ದು ಹೊಸದರ ಜಾರಿಗೆ ಬಂದರೆ 49 ರೂಪಾಯಿಗೆ ದರ ಏರಿಕೆಯಾಗಲಿದೆ.
ಈಗಾಗಲೇ ರಾಜ್ಯದಲ್ಲಿ ಕೆಎಸ್ಆರ್ಟಿಸಿ ಮತ್ತು ಮೆಟ್ರೋ ಪ್ರಯಾಣ ಟಿಕೆಟ್ ತರ ಏರಿಕೆ ಮಾಡಿ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿತ್ತು. ಇದರಿಂದ ತತ್ತರಿಸಿ ಹೋಗಿರುವ ಜನರಿಗೆ ನಂದಿನಿ ಹಾಲಿನ ದರ ಏರಿಕೆಯ ಬಿಸಿ ಮುಟ್ಟಿಲಿದೆ.
0 Comments