ಚುನಾವಣಾ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಜನತೆಗೆ ಪಂಚ ಗ್ಯಾರಂಟಿಗಳಾದ ಗೃಹಲಕ್ಷ್ಮಿ ಯೋಜನೆ, ಗೃಹಜ್ಯೋತಿ ಯೋಜನೆ, ಶಕ್ತಿ ಯೋಜನೆ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು. ಅಧಿಕಾರಕ್ಕೆ ಬಂದ ನಂತರ ಈ ಉಚಿತ ಯೋಜನೆಗಳನ್ನು ನೀಡುತ್ತಿರುವ ರಾಜ್ಯ ಸರ್ಕಾರವು, ಸಮಾಜದಲ್ಲಿ ಬಡವರ ನೋವನ್ನು ನಿವಾರಿಸುವ ಉದ್ದೇಶದಿಂದ ಪಂಚೆ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಲಾಗುತ್ತಿದೆ. ಇವು ರಾಜ್ಯದ ಜನತೆಗೆ ಉಚಿತ ಉಡುಗೊರೆಗಳಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಇದೇ ವೇಳೆ ಈ ಗ್ಯಾರಟಿ ಯೋಜನೆಗಳಿಗಾಗಿ 51,300 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿರುವುದಾಗಿ ಘೋಷಣೆ ಮಾಡಿದ್ದಾರೆ.
ಶಕ್ತಿ ಯೋಜನೆಗಾಗಿ 5300 ಕೋಟಿ ರೂಪಾಯಿ, ಬೃಹಜೋತಿ ಯೋಜನೆಗಾಗಿ 10,100 ಕೋಟಿ ರೂಪಾಯಿ, ಗೃಹಲಕ್ಷ್ಮಿ ಯೋಜನೆಗೆ 28000 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದ್ದೇವೆ ಎಂದು ಮುಖ್ಯಮಂತ್ರಿಗಳು ಬಜೆಟ್ ಮಂಡನೆ ವೇಳೆ ಘೋಷಣೆ ಮಾಡಿದರು.
0 Comments