"ಆಶಾ ಕಾರ್ಯಕರ್ತೆ"ಯರ ನಿವೃತ್ತಿ ವಯಸ್ಸು 60 ವರ್ಷಕ್ಕೆ ನಿಗದಿ ಪಡಿಸಿದ ರಾಜ್ಯ ಸರ್ಕಾರ

ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ನಿವೃತ್ತಿ ವಯೋಮಿತಿಯನ್ನು 60 ವರ್ಷಕ್ಕೆ ನಿಗದಿಗೊಳಿಸಿ ಸರಕಾರವು ಮಹತ್ವದ ಆದೇಶವನ್ನು ಹೊರಡಿಸಿದೆ. 
ಆಶಾ ಕಾರ್ಯಕರ್ತೆಯರು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿದ್ದು ಸ್ಥಳೀಯ ಸಮುದಾಯದಿಂದ ಆಯ್ಕೆಯಾಗಿ, ಸಮುದಾಯ ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ನಡುವೆ ಕಾರ್ಯನಿರ್ವಹಿಸುತ್ತಿದ್ದಾರೆ. 
ಆಶಾ ಕಾರ್ಯಕರ್ತೆಯರು ಅತಿ ಕಡಿಮೆ ಸಂಬಳಕ್ಕೆ ಹಗಲಿಡೀ ಜನರ ಆರೋಗ್ಯ ದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ತಮ್ಮ ಜೀವದ ಹಂಗನ್ನೇ ತೊರೆದು ಕರ್ತವ್ಯ ನಿರ್ವಹಿಸುತ್ತಾರೆ. ಆಶಾ ಕಾರ್ಯಕ್ರಮದಲ್ಲಿ ರಾಜ್ಯದ್ಯಂತ ಪ್ರತಿ ಜಿಲ್ಲೆಯಲ್ಲೂ ಆಶಾ ಕಾರ್ಯಕರ್ತೆಯರ ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ. ಆಶಾ ನಿಧಿ ಎಂಬ ತಂತ್ರಾಂಶದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ವಿವರಗಳು ನಮೂದಾಗಿರುತ್ತವೆ. ರಾಜ್ಯದಲ್ಲಿ ಆಶಾ ಕಾರ್ಯಕ್ರಮವನ್ನು ಪ್ರಸ್ತುತ ಇರುವ ಜನಸಂಖ್ಯೆ, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು, ಜ್ಞಾನ ಇತ್ಯಾದಿಗಳಿಗೆ ಅನುಗುಣವಾಗಿ ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರ ಸ್ಥಾನಗಳು ಮತ್ತು ಕರ್ತವ್ಯಗಳನ್ನು ತರ್ಕಬದ್ದಗೊಳಿಸಲು ಹೊಸ ನೀತಿ ನಿಯಮಗಳನ್ನು ರೂಪಿಸುವ ಅವಶ್ಯಕತೆ ಇದೆ. 

ಆಶಾ ಕಾರ್ಯಕರ್ತೆರ ಆಯ್ಕೆ ಪ್ರಕ್ರಿಯೆಗೆ 25 ರಿಂದ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು

Post a Comment

0 Comments