ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದು ವಿದ್ಯುತ್ ಬಳಕೆ ಮಾಡುತ್ತಿದ್ದ ಗ್ರಾಹಕರಿಗೆ ಆರು ಕೋಟಿಗೂ ಹೆಚ್ಚು ದಂಡ ವಿಧಿಸಿ ಕಾನೂನು ಕ್ರಮಕ್ಕೆ ಮುಂದಾಗಿದೆ.
ಸೆಸ್ಕ್ ವಿಭಾಗದ ವ್ಯಾಪ್ತಿಗೆ ಒಳಪಡುವ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಮತ್ತು ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಸೆಸ್ಕ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಈ ಜಿಲ್ಲೆಗಳಲ್ಲಿ ಅಕ್ರಮ ವಿದ್ಯುತ್ ಕಳ್ಳತನ, ವಿದ್ಯುತ್ ದುರುಪಯೋಗ ಮಾಡಿದವರ ವಿರುದ್ಧ ಕ್ರಮ ಕೈಗೊಂಡು ಪ್ರಕರಣಗಳನ್ನು ದಾಖಲಿಸಿಕೊಂಡಿದೆ.
ಗ್ರಹ ಬಳಕೆ, ವಾಣಿಜ್ಯ ಬಳಕೆಗಾಗಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಸುಮಾರು 1312 ಪ್ರಕರಣಗಳು ದಾಖಲಾಗಿದೆ.ಈ ಪ್ರಕರಣಗಳಿಂದ 6,32,72,000 ರೂಪಾಯಿ ದಂಡ ವಿಧಿಸಿ ವಸೂಲಿ ಮಾಡಲಾಗುತ್ತಿದೆ.
ವಿದ್ಯುತ್ ಕಳ್ಳತನ ಮಾಡುವುದು ವಿದ್ಯುತ್ ಶಕ್ತಿ ಕಾಯ್ದೆಯ ಅಡಿಯಲ್ಲಿ ಕ್ರಿಮಿನಲ್ ರೀತಿಯಂತೆಯೇ ಶಿಕ್ಷಾರ್ಹ ಅಪರಾಧವಾಗಿದೆ. ಆದ್ದರಿಂದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಇದು ಕೇವಲ ಈ ಐದು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿರದೆ ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸುವ ಸಾಧ್ಯತೆಯಿದ್ದು ಅಕ್ರಮ ವಿದ್ಯುತ್ ಸಂಪರ್ಕ ಪಡೆದು ವಿದ್ಯುತ್ ಕಳ್ಳತನ ಮಾಡಿದ್ದೇ ಆದಲ್ಲಿ ದಂಡ ವಿಧಿಸುವುದು ಗ್ಯಾರಂಟಿ..!!
0 Comments