ನಾಳೆ 97ನೇ ಆಸ್ಕರ್ ಪ್ರಶಸ್ತಿ ಪ್ರಧಾನ ಸಮಾರಂಭ

ಆಸ್ಕರ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಭಾರತೀಯ ಕಾಲಮಾನದಂತೆ ಮಂಗಳವಾರ ಬೆಳಿಗ್ಗೆ ಲಾಸ್ ಏಂಜಲೀಸ್ ನ ಡಾಲ್ಬಿ ಥಿಯೇಟರ್ ನಲ್ಲಿ  ನಡೆಯಲಿದೆ. ಭಾರತದ ಕಿರು ಚಿತ್ರ ಫೇಸ್ ನಲ್ಲಿರುವುದು ಹೆಮ್ಮೆಯ ವಿಷಯವಾಗಿದೆ.
ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದ ನೇರ ಪ್ರಸಾರ ಕಾರ್ಯಕ್ರಮವನ್ನು ಇದೇ ಮೊದಲ ಬಾರಿಗೆ ಜಿಯೋ ಹಾಟ್ ಸ್ಟಾರ್ ನಲ್ಲಿ ಪ್ರಸಾರ ಮಾಡಲಾಗುತ್ತಿದೆ. ಭಾರತದಿಂದ ಬಾಲಿವುಡ್ ನ ಲಾಪತಾ ಲೇಡೀಸ್ ಆಸ್ಕರ್ ಪ್ರಶಸ್ತಿಗೆ ಆಯ್ಕೆಯಾಗಿತ್ತಾದರೂ ಪ್ರಶಸ್ತಿ ಸುತ್ತಿನಿಂದ ಹೊರ ಬಿದ್ದು ನಿರಾಸೆ ಮೂಡಿಸಿತ್ತು. ಆದರೆ ಭಾರತದ ಕಿರುಚಿತ್ರ ಅನುಜಾ ಲೈವ್ ಆಕ್ಷನ್ ಕಿರುಚಿತ್ರದಲ್ಲಿ ಪ್ರಶಸ್ತಿ ಸಾಲಿನಲ್ಲಿರುವುದು ಮತ್ತಷ್ಟು ನಿರೀಕ್ಷೆಯನ್ನು ಹೆಚ್ಚಿಸಿದೆ. 

ಈ ವರ್ಷದ ಆರಂಭದಲ್ಲಿ ಲಾಸ್ ಏಂಜಲೀಸ್ ಕಾಡ್ಗಿಚ್ಚಿಗೆ ತುತ್ತಾದ ಪರಿಣಾಮವಾಗಿ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕೆಲ ದಿನಗಳ ಮಟ್ಟಿಗೆ ಮುಂದೂಡಲಾಗಿತ್ತು.








Post a Comment

0 Comments