ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಸಮರ ಮತ್ತು ದೇಶವನ್ನು ವಶಪಡಿಸಿಕೊಳ್ಳುವ ಬೆದರಿಕೆಯನ್ನು ಎದುರಿಸುತ್ತಿರುವ ಹಾಗೂ ಫೆಡರಲ್ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ನೂತನ ಪ್ರಧಾನಿ ಕಾರ್ನಿ ಅವರ ಆಯ್ಕೆ ಬಹಳ ಮಹತ್ವವನ್ನು ಪಡೆದುಕೊಂಡಿದೆ.
ಬ್ಯಾಂಕ್ ಆಫ್ ಕೆನಡಾದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದ ಕಾರ್ನಿಯವರು ಆರ್ಥಿಕ ಬಿಕ್ಕಟ್ಟುಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು.2008ರ ಆರ್ಥಿಕ ಬಿಕ್ಕಟ್ಟಿನಿಂದ ಕೆನಡಾ ಕ್ಷಿಪ್ರವಾಗಿ ಚೇತರಿಕೆಯನ್ನೂ ಕಂಡಿತ್ತು.
ಕೆನಡಾದ ಪ್ರಧಾನಿಯಾಗಿದ್ದ ಜಸ್ಟಿನ್ ಟ್ರುಡೋ ಅವರು ಜನವರಿಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದು, ನೂತನ ಪ್ರಧಾನಿ ಆಯ್ಕೆಯವರೆಗೆ ಹಂಗಾಮಿ ಪ್ರಧಾನಿಯಾಗಿ ಮುಂದುವರೆದಿದ್ದರು. ಈಗ ಅವರ ಸ್ಥಾನಕ್ಕೆ 59 ವರ್ಷ ಪ್ರಾಯದ ಮಾರ್ಕ್ ಕಾರ್ನಿ ಅವರನ್ನು ಆಯ್ಕೆ ಮಾಡಲಾಗಿದೆ.
0 Comments