ಹೆತ್ತವರನ್ನು ನೋಡಿಕೊಂಡರಷ್ಟೇ ಮಕ್ಕಳಿಗೆ ಆಸ್ತಿ; ಇಲ್ಲವಾದಲ್ಲಿ ದಾನ ಪತ್ರ, ಆಸ್ತಿ ಪತ್ರ ರದ್ದು..!!

ಇತ್ತೀಚಿನ ದಿನಗಳಲ್ಲಿ ಹೆತ್ತ ಮಕ್ಕಳೇ ಪೋಷಕರನ್ನು ಸಾಕಿ ಸಲಹುವ ಜವಾಬ್ದಾರಿಯನ್ನು ಮರೆತು ಅವರನ್ನು ನಿರ್ಲಕ್ಷಿಸುತ್ತಿದ್ದಾರೆ. ಇಷ್ಟೇ ಯಾಕೆ? ಕೋಟಿ ಕೋಟಿ ಆಸ್ತಿಗಳನ್ನು ಲಪಟಾಯಿಸಿ ಕೊನೆಗೆ ಸತ್ತವರನ್ನು ಹಿರಿಯ ನಾಗರಿಕರನ್ನು ಆಶ್ರಮಕ್ಕೆ ಸೇರಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇಂತಹ ಪ್ರಕರಣಗಳಿಗೆ ಹಾಕುವ ಕುರಿತು ವಿಧಾನ ಪರಿಷತ್ ನಲ್ಲೂ ಪ್ರತಿಧ್ವನಿಸಿದೆ.
ತಂದೆ ತಾಯಿ ಹಾಗೂ ಹಿರಿಯ ನಾಗರಿಕರನ್ನು ಆರೈಕೆ ಮಾಡದೆ ನಿರ್ಲಕ್ಷ್ಯಿಸಿದರೆ, ತನ್ನ ಮಕ್ಕಳಿಗೆ ಅಥವಾ ಸಂಬಂಧಪಟ್ಟವರಿಗೆ ಅವರು ನೀಡಿದ ವಿಲ್ ಅಥವಾ ದಾನ ಪತ್ರವನ್ನು ರದ್ದು ಮಾಡುವ ಅವಕಾಶವನ್ನು ಕೇಂದ್ರ ಸರಕಾರದ "ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ-2007" ನೀಡಿದೆ ಎಂದು ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಕೇಂದ್ರ ಸರಕಾರವು 2007ರಲ್ಲೇ 'ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ'ಯನ್ನು ಜಾರಿಗೆ ತಂದಿದೆ. ಆದರೆ ಈ ಬಗ್ಗೆ ಹೆಚ್ಚಿನವರಿಗೆ ಮಾಹಿತಿಯ ಕೊರತೆ ಇದೆ. ಈ ಮಾಹಿತಿಯನ್ನು ಪರಿಣಾಮಕಾರಿಯಾಗಿ ಎಲ್ಲರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದಲೇ ವಿಧಾನ ಪರಿಷತ್ ನಲ್ಲಿ ಈ ಕಾಯ್ದೆಯ ಬಗ್ಗೆ ಉಲ್ಲೇಖಿಸುತ್ತಿದ್ದೇನೆ ಎಂದು ಸಚಿವರು ಹೇಳಿದರು. 

'ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣಾ ಮತ್ತು ಕಲ್ಯಾಣ ಕಾಯ್ದೆ'ಯ ಪ್ರಕಾರ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರನ್ನು ಆರೈಕೆ ಮಾಡಬೇಕು. ಔಷಧಿ ಸೇರಿದಂತೆ ಅವರ ಮಾಸಿಕ ಖರ್ಚಿಗೆ ಹಣವನ್ನು ನೀಡಬೇಕು. ಒಂದು ವೇಳೆ ಹಣ ನೀಡದಿದ್ದರೆ ಅಥವಾ ಆರೈಕೆ ಮಾಡಲು ನಿರಾಕರಿಸಿ ನಿರ್ಲಕ್ಷಿಸಿದರೆ ಹಿರಿಯ ನಾಗರಿಕರ ಸೆಕ್ಷನ್ 09 ರ ಅಡಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ದೂರು ಸಲ್ಲಿಸಬಹುದಾಗಿದೆ. 

ಹಿರಿಯ ನಾಗರಿಕರು ಸಲ್ಲಿಸಿದ ದೂರು ಸತ್ಯವೆಂದು ಸಾಬೀತಾದರೆ, ತಂದೆ ತಾಯಿಯಿಂದ ಆಸ್ತಿ ಪಡೆದು ಅವರ ಆರೈಕೆ ಮಾಡದಿದ್ದರೆ ಸೆಕ್ಷನ್ 23ರಂತೆ ಪೋಷಕರು ತಮ್ಮ ಮಕ್ಕಳ ಅಥವಾ ಸಂಬಂಧಿಕರ ಹೆಸರಿನಲ್ಲಿ ಬರೆದಿರುವ ವಿಲ್ ಅಥವಾ ದಾನ ಪತ್ರವನ್ನು ರದ್ದುಗೊಳಿಸಿ ಮತ್ತೆ ಪೋಷಕರ ಹೆಸರಿಗೆ ಮರು ಸ್ಥಾಪಿಸಲು ಅಥವಾ ಮರು ವರ್ಗಾಯಿಸಲು ಕಾನೂನಿನಲ್ಲಿ ಅವಕಾಶವಿದೆ. ಈ ಜವಾಬ್ದಾರಿಯನ್ನು ಉಪ ವಿಭಾಗ ಅಧಿಕಾರಿಗಳಿಗೆ ನೀಡಲಾಗಿದೆ= ಈಗಾಗಲೇ ಉಪವಿಭಾಗಾಧಿಕಾರಿಗಳ ಮುಂದೆ ಸಾವಿರಾರು ಪ್ರಕರಣಗಳಿವೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತೀ ತಿಂಗಳು ಉಪವಿಭಾಗಾಧಿಕಾರಿಗಳ ಜೊತೆ ಮಾಸಿಕ ಸಭೆ ನಡೆಸಲಾಗುತ್ತಿದೆ. ಅಲ್ಲದೆ ಜಿಲ್ಲಾಧಿಕಾರಿಗಳಿಗೆ ಅಪೀಲು ಹೋಗಲು ಅರ್ಜಿದಾರರಿಗೆ ಅವಕಾಶ ನೀಡಲಾಗಿದೆ ಎಂದು ಸದನಕ್ಕೆ ಸಚಿವರು ಮಾಹಿತಿ ನೀಡಿದ್ದಾರೆ.

Post a Comment

0 Comments