ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ರವಾನೆ ಮಾಡಲಾಗುತ್ತಿದೆ..!!

ಕರ್ನಾಟಕ ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಹೆಣ್ಣು ಮಕ್ಕಳ ಜನನವನ್ನು ಉತ್ತೇಜಿಸುವ ಉದ್ದೇಶದಿಂದ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸರ್ಕಾರ 2006-07ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯನ್ನು ಆರಂಭಿಸಿತು. ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಜನಿಸುವ ಮೊದಲು ಎರಡು ಹೆಣ್ಣು ಮಕ್ಕಳು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಈಗ 2006-07ನೇ ಸಾಲಿನಲ್ಲಿ ಈ ಯೋಜನೆಯಡಿ ಮಾಡಿಸಿದ್ದ ಹೆಣ್ಣು ಮಗುವಿನ ಬಾಂಡ್ ಈಗ 18 ವರ್ಷ ತುಂಬಿ ಮೆಚುರಿಟಿ ಹಂತ ತಲುಪಿದ್ದು ಫಲಾನುಭವಿಗಳಿಗೆ ಹಣ ನೀಡಲಾಗುತ್ತದೆ.

ಭಾಗ್ಯಲಕ್ಷ್ಮಿ ಯೋಜನೆಯಡಿ 2006-07ನೇ ಸಾಲಿನಲ್ಲಿ ಬಾಂಡ್ ಮಾಡಿಸಿದ್ದ ಸುಮಾರು 2.30 ಲಕ್ಷ ಹೆಣ್ಣು ಮಕ್ಕಳ ಬಾಂಡ್ ಈಗ 18 ವರ್ಷ ಪೂರೈಸಿದೆ. ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಫಲಾನುಭವಿಗಳಿಗೆ ಹಣವನ್ನು ಡಿಬಿಟಿ ಮೂಲಕ ಕಳುಹಿಸುತ್ತಿದ್ದು, ಈಗಾಗಲೇ ಶೇಕಡಾ 10 ರಷ್ಟು ಮಂದಿಗೆ ಹಣ ರವಾನೆಯಾಗಿದೆ. ಇನ್ನು ಬಾಕಿ ಉಳಿದಿರುವ ಸಲಾಂಭಾವಿಗಳಿಗೆ ಹಂತ ಹಂತವಾಗಿ ಹಣವನ್ನು ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಈ ಭಾಗ್ಯ ಲಕ್ಷ್ಮಿ ಯೋಜನೆಯಲ್ಲಿ ನೋಂದಣಿ ಮಾಡಿಸಿಕೊಂಡಿದ್ದ ಫಲಾನುಭವಿಗಳಿಗೆ ಎಲ್ಐಸಿ ಕಡೆಯಿಂದ ಪರಿಪಕ್ವ ಮೊತ್ತ ಮಂಜೂರಾಗಿದೆ. ಇಲಾಖೆಯು ಈಗಾಗಲೇ ಎಲ್ಲಾ ಫಲಾನುಭವಿಗಳಿಂದ ಬಾಂಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಪಡೆದು ಹಣ ರವಾನಿಸುವ ವ್ಯವಸ್ಥೆಯನ್ನು ಮಾಡುತ್ತಿದೆ. ಎಲ್ಲಾ ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಗನವಾಡಿ ಕೇಂದ್ರ ಹಾಗೂ ಶಿಶು ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

ಈಗ ಭಾಗ್ಯಲಕ್ಷ್ಮಿ ಮತ್ತು ಸುಕನ್ಯಾ ಸಮೃದ್ಧಿ ಯೋಜನೆ ವಿಲೀನ: ಈಗ ಭಾಗ್ಯಲಕ್ಷ್ಮಿ ಯೋಜನಯನ್ನು ಸುಕನ್ಯಾ ಸಮೃದ್ಧಿ ಯೋಜನೆಯೊಂದಿಗೆ ವಿಲೀನ ಮಾಡಲಾಗಿದೆ. ಹೆಣ್ಣು ಮಗುವಿನ ಸ್ಥಾನ ಉನ್ನತೀಕರಿಸುವ ನಿಟ್ಟಿನಲ್ಲಿ ಈಗಲೂ ಬಡತನ ರೇಖೆಗಿಂತ ಕೆಳಗಿರುವ ಅಂದರೆ ಬಿಪಿಎಲ್ ಕುಟುಂಬಗಳಲ್ಲಿ ಹೆಣ್ಣು ಮಗುವಿನ ಜನನ ಉತ್ತೇಜಿಸಲು 2006-07ನೇ ಸಾಲಿನಲ್ಲಿ ಹೆಣ್ಣು ಮಕ್ಕಳ ರಕ್ಷಣೆಗೆ ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲಾಗಿತ್ತು‌ ಆದರೆ 2020 21ನೇ ಸಾಲಿನಿಂದ ಆಡಳಿತಾತ್ಮಕ ಕಾರಣಗಳಿಂದ ಭಾಗ್ಯಲಕ್ಷ್ಮಿ ಯೋಜನೆಯನ್ನು ಅಂಚೆ ಇಲಾಖೆಯ ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯ ಮೂಲಕ ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಯನ್ನು ಭಾಗ್ಯಲಕ್ಷ್ಮಿ ಸುಕನ್ಯಾ ಸಮೃದ್ಧಿ ಖಾತೆ ಯೋಜನೆ ಎಂದು ಮರುನಾಮಕರಣ ಮಾಡಲಾಗಿದೆ. ಈಗ ಭಾಗ್ಯಲಕ್ಷ್ಮಿ ಸುಕನ್ಯಾ ಸಮೃದ್ಧಿ ಖಾತೆ ತೆರೆಯಲು ಬಯಸುವ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಹೆಣ್ಣು ಮಕ್ಕಳ ಪೋಷಕರು ಅಂಗನವಾಡಿಯಿಂದ ಅರ್ಜಿಯನ್ನು ಪಡೆದುಕೊಂಡು ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬಹುದು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕ ಸುಕನ್ಯಾ ಸಮೃದ್ಧಿ ಖಾತೆ ಪುಸ್ತಕ ನೀಡಲಾಗುತ್ತದೆ. ಈ ಖಾತೆಗೆ ಸರಕಾರವು ಹೆಣ್ಣು ಮಗುವಿಗೆ 15 ವರ್ಷ ತುಂಬುವವರೆಗೆ ಭಾಗ್ಯಲಕ್ಷ್ಮಿ ಯೋಜನೆಯ ಹಣವನ್ನು ಪ್ರತೀ ವರ್ಷ 3000ದಂತೆ ಜಮೆ ಮಾಡುತ್ತದೆ .ಅಷ್ಟೇ ಅಲ್ಲದೆ ಸುಕನ್ಯಾ ಖಾತೆಗೆ ಫಲಾನುಭವಿಗಳು ಕೂಡ ಹಣವನ್ನು ಜಮೆ ಮಾಡುತ್ತಾ ಹೋಗಬಹುದು.
.

Post a Comment

0 Comments