ರಾಜ್ಯದಲ್ಲಿ ಈ ವರ್ಷ ಪರೀಕ್ಷೆಗೆ ಒಟ್ಟು 8,96,447 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು ಅದರಲ್ಲಿ 842,817 ಹೊಸದಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಾಗಿದ್ದಾರೆ. ಉಳಿದಂತೆ 38,091 ವಿದ್ಯಾರ್ಥಿಗಳು ಪುನರಾವರ್ತಿತರಾಗಿದ್ದು, 15539 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ಕರ್ನಾಟಕದ ಅತ್ಯಂತ ನಡೆಯುತ್ತಿರುವ ಈ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತ 2023ರ ಕಲಾಂ 163 ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ. ಪರೀಕ್ಷೆ ಕೇಂದ್ರಗಳಲ್ಲಿ ನಡೆಯುವ ಅಕ್ರಮ ಮತ್ತು ನಕಲುಗಳನ್ನು ತಡೆಯಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕ್ಯಾಸ್ಟಿಂಗ್ ಅಳವಡಿಸಲಾಗಿದೆ. ಇಡೀ ಕೇಂದ್ರಗಳಲ್ಲಿ ಸಿಸಿಟಿವಿಯನ್ನೂ ಅಳವಡಿಸಲಾಗಿದೆ. ಇದನ್ನು ಜಿಲ್ಲಾ ಪಂಚಾಯತ್ ಸಿಇಒ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯಿಂದ ನಿಯಂತ್ರಿಸಲಾಗುತ್ತದೆ. ಎಲ್ಲಾ ಅಕ್ರಮಗಳು ಕಂಪ್ಯೂಟರ್ ಪರದೆಯಲ್ಲಿ ಗೋಚರವಾಗುವಂತೆ ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಶುಭವಾಗಲಿ...
0 Comments