ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಸಹಾಯವಾಣಿ ಆರಂಭ

ಈ ತಿಂಗಳ 21ನೇ ತಾರೀಖಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಆರಂಭವಾಗುತ್ತಿದ್ದು, ಈ ದಿಸೆಯಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಸಹಾಯವಾಣಿಯನ್ನು ಆರಂಭಿಸಿದೆ.
ಮಾರ್ಚ್ ಹತ್ತರಿಂದ ಏಪ್ರಿಲ್ ನಾಲ್ಕರವರೆಗೆ ಸಹಾಯವಾಣಿಯು ಕಾರ್ಯನಿರ್ವಹಿಸಲಿದೆ. ಸಹಾಯವಾಣಿ ಸಂಖ್ಯೆಗಳಾದ 080 23310075, 080 23310076 ಕ್ಕೆ ಪೋಷಕರು ಹಾಗೂ ವಿದ್ಯಾರ್ಥಿಗಳು ಕರೆ ಮಾಡಿ ತಮ್ಮ ಗೊಂದಲಗಳನ್ನು ನಿವಾರಣೆ ಮಾಡಿಕೊಳ್ಳಬಹುದಾಗಿದೆ. 

ವಿದ್ಯಾರ್ಥಿಗಳ ಸಾಮರ್ಥ್ಯ, ಬುದ್ಧಿಶಕ್ತಿ, ಆಸಕ್ತಿ, ಕ್ರಿಯಾಶೀಲತೆ, ಕಠಿಣ ಪರಿಶ್ರಮಗಳನ್ನು ಗಣನೆಗೆ ತೆಗೆದುಕೊಳ್ಳದೆ ಹೆಚ್ಚು ಅಂಕಗಳನ್ನು ಗಳಿಸುವಂತೆ ಪೋಷಕರು ಒತ್ತಡಗಳನ್ನು ಹಾಕುತ್ತಿರುವುದು ಸಾಮಾನ್ಯ ಸಮಸ್ಯೆಯಾಗಿದೆ. ಇದರಿಂದ ವಿದ್ಯಾರ್ಥಿಗಳು ಅಧ್ಯಯನದ ಕಡೆಗೆ ಗಮನ ಹರಿಸಲಾಗದಿರುವುದು, ಏಕಾಗ್ರತೆ ಕಳೆದುಕೊಳ್ಳುತ್ತಿರುವುದು ಕಂಡು ಬಂದಿದ್ದು, ಈ ಸಮಸ್ಯೆ ನಿವಾರಣೆಯಾಗದೆ ವಿದ್ಯಾರ್ಥಿಗಳು ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸಾಧ್ಯವಾಗದು. ಈ ಹಿನ್ನಲೆಯಲ್ಲಿ ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸ್ಪೂರ್ತಿ ನೀಡಬೇಕಿದೆ. ಇಂತಹ  ತೊಂದರೆಗಳಿರುವ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹರಿಸುವ ಹಾಗೂ ಭಯ ರಹಿತವಾಗಿ ಪರೀಕ್ಷೆ ಬರೆಯಲು, ಆತ್ಮಸ್ಥೈರ್ಯ ತುಂಬಲು ಮಂಡಳಿಯು ಸಹಾಯವಾಣಿಯನ್ನು ಆರಂಭಿಸಿದೆ ಪಾಲಕರು ವಿದ್ಯಾರ್ಥಿಗಳು ಮೇಲೆ ತಿಳಿಸಿರುವ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಸಮಸ್ಯೆಗಳು ಸಂದೇಹಗಳಿದ್ದಲ್ಲಿ ಪರಿಹಾರ ಕಂಡುಕೊಳ್ಳಬೇಕಿದ್ದು ಎಂದು ಮಂಡಳಿ ನಿರ್ದೇಶಕ ಎಚ್ ಎನ್ ಗೋಪಾಲಕೃಷ್ಣ ತಿಳಿಸಿದ್ದಾರೆ.

ಸಹಾಯವಾಣಿ ಸಮಯ ಈ ಕೆಳಗಿನಂತಿದೆ 
1. ಮಾರ್ಚ್ ಹತ್ತರಿಂದ 19 ನೇ ತಾರೀಖಿನವರೆಗೆ ಮಧ್ಯಾಹ್ನ 2:30 ರಿಂದ ಗಂಟೆ 6:30ವರೆಗೆ 
2. ಮಾರ್ಚ್ 16 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 5:00 ವರೆಗೆ 
3. ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಿಯಂತ್ರಣ ಕೊಠಡಿಯಾಗಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ.

Post a Comment

0 Comments