ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಬಿಇ/ಸಿ.ಟೆಕ್, ಸಿಎಂ,ಸಿಎಂಎ, ಸಿಎಫ್ಎ, ಐಸಿಡಬ್ಲ್ಯೂಎ, ಎಂಸಿಎ ವಿದ್ಯಾರ್ಥಿಗಳನ್ನು ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳ ವಯೋಮಿತಿಯು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 21 ವರ್ಷದಿಂದ ಗರಿಷ್ಠ 38 ವರ್ಷದೊಳಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋ ಸಡಿಲಿಕೆ ಅನ್ವಯವಾಗಲಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಅನ್ವಯವಾಗಲಿದ್ದು, ಎಸ್ಸಿ /ಎಸ್ಟಿ /ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ 59ರೂ ಹಾಗೂ ಇತರ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 1180 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ಪಾವತಿಸಬೇಕಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು. ಸಂವಹನದ ಉದ್ದೇಶಕ್ಕಾಗಿ ಸರಿಯಾದ ಇ-ಮೇಲ್ ಐಡಿ, ಮೊಬೈಲ್ ಸಂಖ್ಯೆ, ಐಡಿ ಪುರಾವೆ ಹೊಂದಿರಬೇಕು. ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್ ಇತ್ಯಾದಿ ದಾಖಲೆಗಳ ಸ್ಕ್ಯಾನ್ ಪ್ರತಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ ನಡೆಸುವ ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ಆನ್ಲೈನ್ ಪರೀಕ್ಷೆಯನ್ನು ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಸುವ ಸಾಧ್ಯತೆ ಇದೆ.
ಹೆಚ್ಚಿನ ಮಾಹಿತಿಗಾಗಿ pnbindia.in ಭೇಟಿ ನೀಡಬಹುದು. ಅಧಿಸೂಚನೆಗಾಗಿ pnbindia.in/Recruitments.aspx ಅನ್ನು ಗಮನಿಸಬಹುದು.
0 Comments