ಸುಪ್ರೀಂ ಕೋರ್ಟಿನ ನಿರ್ದೇಶನದಂತೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯ ಜೋಡಣಾ ಪ್ರಕ್ರಿಯೆ ಕಾನೂನಾತ್ಮಕವಾಗಿ ನಡೆಯಲಿದೆ. ಈ ಜೋಡಣೆ ಕ್ರಮ ಅಥವಾ ಲಿಂಕ್ ಪ್ರಕ್ರಿಯೆ ಸಂಪೂರ್ಣ ಸ್ವಯಂ ಪ್ರೇರಿತವಾಗಿದ್ದು, ಸಂವಿಧಾನಿಕ ನಿಬಂಧನೆ ಹಾಗೂ ಶಾಸನಬದ್ಧ ನಿಯಮಾನುಸಾರ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಮತದಾರರ ಗುರುತಿನ ಚೀಟಿ ಜೊತೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು ಕಡ್ಡಾಯವಲ್ಲ. ಜನತೆ ಸ್ವಯಂ ಪ್ರೇರಣೆಯಿಂದ ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದು. ಆಧಾರ್ ಜೋಡಣೆಯಾಗದ ಮತದಾರರ ಹೆಸರನ್ನು ಯಾವುದೇ ಕಾರಣಕ್ಕೂ ಮತಪಟ್ಟಿಯಿಂದ ತೆಗೆದು ಹಾಕುವುದಿಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ.
ಈ ಸಂಬಂಧ ಕೇಂದ್ರ ಗೃಹ ಕಾರ್ಯದರ್ಶಿ, ಶಾಸಕಾಂಗ ಕಾರ್ಯದರ್ಶಿ, ಮಾಹಿತಿ ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿ, ಆಧಾರ್ ಸಂಸ್ಥೆ ಸಿಇಒ ಅವರೊಂದಿಗೆ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಆಧಾರ್ ಸಂಸ್ಥೆ ಹಾಗೂ ಚುನಾವಣಾ ಆಯೋಗದ ತಾಂತ್ರಿಕ ತಜ್ಞರ ನಡುವೆ ಸಮಾಲೋಚನೆಗಳು ನಡೆಯಲಿವೆ.
0 Comments