ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಜೊತೆಯಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ. ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಆಲಿಕಲ್ಲು ಮಳೆಯೊಂದಿಗೆ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಜನರು ಸಂಜೆ ವೇಳೆ ಹಳ್ಳ ಕೊಳಗಳಿರುವ ಪ್ರದೇಶಗಳಿಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.
ಆಲಿಕಲ್ಲು ಮಳೆ, ಗುಡುಗು ಸಹಿತ ಗಾಳಿ ಮಳೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜನರು ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.
0 Comments