ಹುದ್ದೆಗಳು ಮತ್ತು ವೇತನ ವಿವರ
1. ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆ:29, ವೇತನ 1,20,000-2,80,000ರೂ
2. ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆ: 48, ವೇತನ-1,00,000-2,60,000.,ರೂ
3. ಸೀನಿಯರ್ ಮ್ಯಾನೇಜರ್ ಹುದ್ದೆ: 45, ವೇತನ-90,000-2,40,000
4. ಮ್ಯಾನೇಜರ್ ಹುದ್ದೆ: 75, ವೇತನ-80,000-2,20,000
5 ಡೆಪ್ಯುಟಿ ಮ್ಯಾನೇಜರ್ ಹುದ್ದೆ: 33 , ವೇತನ- 70,000-2,00,000
6. ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆ: 11, ವೇತನ 60,000-1,80,000ರೂ.
ಆಸಕ್ತ ಅಭ್ಯರ್ಥಿಗಳು ಅದಿ ಸೂಚನೆಯಲ್ಲಿ ತಿಳಿಸಿರುವಂತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಇ-ಮೇಲ್ ಐಡಿ, ಮೊಬೈಲ್ ಸಂಖ್ಯೆ, ಶೈಕ್ಷಣಿಕ ಅರ್ಹತೆ, ಐಡಿ ಪ್ರೂಫ್ ನಂತಹ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಎನ್ಎಂಡಿಸಿ ಸ್ಟೀಲ್ ಲಿಮಿಟೆಡ್ ನ ಎಸ್ಸಿ/ಎಸ್ಟಿ/ ಅಂಗವಿಕಲ/ ಮಾಜಿ ಸೈನಿಕ/ ಇಲಾಖೆ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ವಿಧಿಸಿಲ್ಲ. ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳು 500 ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಡಿಪ್ಲೋಮಾ, ಎಂಜಿನಿಯರಿಂಗ್ ಪದವಿ, ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ಹುದ್ದೆಗಳಿಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕೆಲಸದ ಅನುಭವವನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ ಹುದ್ದೆಗಳಿಗೆ ಅನುಗುಣವಾಗಿ 45 ರಿಂದ 52 ವರ್ಷದೊಳಗಿರಬೇಕು. ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್ ಸಿ ಎಸ್ ಟಿ ವರ್ಗದ ಅಭ್ಯರ್ಥಿಗಳಿಗೆ ಐದು ವರ್ಷ ವಯೋ ಸಡಿಲಿಕೆ ಅನ್ವಯವಾಗಲಿದೆ.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ nmdcsteel.nmdc.co.in ವೆಬ್ಸೈಟನ್ನು ಸಂಪರ್ಕಿಸಬಹುದು.
0 Comments