ಮಂಗಳೂರು-ಉಡುಪಿ-ಮಣಿಪಾಲ ಇಂಟರ್ ಸಿಟಿ 64 ಕಿಲೋಮೀಟರ್ ಉದ್ದದ ಮೆಟ್ರೋ ರೈಲು ಸಂಪರ್ಕ ಮಾರ್ಗ ಕಲ್ಪಿಸಲು ತಾಂತ್ರಿಕ ಮತ್ತು ಆರ್ಥಿಕ ಕಾರ್ಯಸಾಧತೆಯ ಕುರಿತು ಅಧ್ಯಯನ ನಡೆಸಲು ಕರ್ನಾಟಕ ರಾಜ್ಯ ಸರ್ಕಾರವು ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ(ಸಿ.ಎಂ.ಸಿ.ಆರ್.ಎಲ್) ಸೂಚನೆ ನೀಡಿದೆ. ಈ ಬಗ್ಗೆ ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ ಪತ್ರ ಬರೆದಿದೆ. ಈ ಕುರಿತಂತೆ ಕೆಪಿಸಿಸಿಯ ಮಾಜಿ ಕಾರ್ಯದರ್ಶಿ ಮೋಹನ್ ದಾಸ್ ಹೆಗ್ಡೆಯವರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರಿಗೆ ಪತ್ರ ಬರೆದಿದ್ದು, ಮಂಗಳೂರು ಮಣಿಪಾಲ ನಡುವೆ ಮೈ
ಪ್ರಮುಖ ನಗರ, ಅರೆ ನಗರ, ಕೈಗಾರಿಕಾ ವಲಯಗಳನ್ನು ಒಳಗೊಂಡಂತೆ ಮೆಟ್ರೋ ಮಾರ್ಗಗಳನ್ನು ಅಭಿವೃದ್ಧಿ ಪಡಿಸಬಹುದು. ಇದರಿಂದ ಆರ್ಥಿಕ ಕ್ಷೇತ್ರದಲ್ಲಿ ಪ್ರಗತಿ, ನಗರಾಭಿವೃದ್ಧಿ ಹಾಗೂ ಸುಗಮ ಸಾರಿಗೆ ವ್ಯವಸ್ಥೆಗೂ ತುಂಬಾನೇ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಈಗ ಮಂಗಳೂರು ಉಡುಪಿ ಮಣಿಪಾಲ ಸಾರಿಗೆ ವ್ಯವಸ್ಥೆ ತುಂಬಾ ಜನ ದಟ್ಟಣೆಯಿಂದ ಕೂಡಿದೆ. ಎಲ್ಲಾ ಜನರು ರಸ್ತೆ ಮಾರ್ಗವನ್ನೇ ಅವಲಂಬಿಸಿರುವುದರಿಂದ ಸಂಚಾರಕ್ಕೆ ಹೆಚ್ಚಿನ ಸಮಯ ತಗುಲುತ್ತಿದೆ. ಜನಸಂಖ್ಯೆ ಹೆಚ್ಚಿರುವುದರಿಂದ ಮೆಟ್ರೋ ರೈಲು ವ್ಯವಸ್ಥೆ ಆರಂಭಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತವಾಗಿದೆ.
0 Comments