ನೌಕಾಪಡೆಯಲ್ಲಿ ಗ್ರೂಪ್ ಸಿ ಹುದ್ದೆಗಳಿಗೆ ನೇಮಕಾತಿ

ಭಾರತೀಯ ನೌಕಾಪಡೆಯು ಗ್ರೂಪ್ ಸಿ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಿದೆ. ಈ ನೇಮಕಾತಿಗಾಗಿ ಮಾರ್ಚ್ 12 ರಿಂದ ಅರ್ಜಿ ಸಲ್ಲಿಕೆ ಪ್ರತ್ಯೇಯು ಆರಂಭವಾಗಲಿದ್ದು ಆಸಕ್ತ ಅಭ್ಯರ್ಥಿಗಳು ಏಪ್ರಿಲ್ ಒಂದರ ಮೊದಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. 
ಸಿರಾಂಗ್ ಆಫ್ ಲಾಸ್ಕೆರ್ಸ್-57,ಲಾಸ್ಕರ್-192, ಫೈರ್ ಮನ್-73, ಟಾಪಾಸ್-5 ಸೇರಿ ಒಟ್ಟು 327 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಈ ಎಲ್ಲಾ ಹುದ್ದೆಗಳಲ್ಲಿ ಕೆಲವೊಂದು ವರ್ಗಗಳ ಅಭ್ಯರ್ಥಿಗಳಿಗೆ ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಹತ್ತನೇ ತರಗತಿ ಪೂರ್ಣಗೊಳಿಸಿರುವ ದೇಶದ ಯಾವುದೇ ಮೂಲೆಯ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ನೇಮಕ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. 

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ಒಳಗಿನವರಾಗಿರಬೇಕು. ಮೀಸಲು ವರ್ಗದ ವ್ಯಾಪ್ತಿಗೆ ಬರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ಐದು ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಈ ಎಲ್ಲಾ ಈ ಹುದ್ದೆಗಳಿಗೆ ಮಾಸಿಕ 18000 ದಿಂದ 81,000 ವರೆಗೆ ವೇತನ ಶ್ರೇಣಿ ಇರಲಿದೆ. ಹಾಗೆಯೇ ಎಲ್ಲಾ ವರ್ಗಗಳ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. 

ಈ ಹುದ್ದೆಗಳಿಗೆ ಮೊದಲಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪೈಕಿ ಅರ್ಹರನ್ನು ಶಾರ್ಟ್ ಲಿಸ್ಟ್ ಮಾಡಿ ಲಿಖಿತ ಪರೀಕ್ಷೆಗೆ ಆಹ್ವಾನಿಸಲಾಗುತ್ತದೆ. ಇದರಲ್ಲಿ ಉತ್ತೀರ್ಣರಾದವರನ್ನು ಕೌಶಲ್ಯ ಪರೀಕ್ಷೆ ನಂತರ ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ನಡೆಸಿ ನೇಮಕ ಮಾಡಲಾಗುತ್ತದೆ. ಹೆಚ್ಚಿನ ವಿವರಗಳಿಗಾಗಿ www.joinindiannavy.gov.in ವೆಬ್ಸೈಟಿಗೆ ಭೇಟಿ ನೀಡಬಹುದು.

Post a Comment

0 Comments