ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ, ಸಾಹಿತಿಗಳಿಗೆ ನಾನಾ ರೀತಿಯಲ್ಲಿ ಪ್ರೋತ್ಸಾಹಿಸಿ ಸಾಹಿತ್ಯ ಕ್ಷೇತ್ರವನ್ನು ಬೆಳೆಸುವ ಕೆಲಸವನ್ನು ಮಾಡುತ್ತಿದೆ. ಪ್ರಸ್ತುತ ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022, 2023 ಮತ್ತು 2024ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಪ್ರಕಾಶಕರು/ ಮುದ್ರಕರು/ ಕಲಾವಿದರು/ ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು, ಚಿತ್ರ ಕಲಾವಿದರ ಪೂರ್ಣ ವಿಳಾಸ, ದೂರವಾಣಿ ಸಂಖ್ಯೆ – ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ದಿನಾಂಕ: 29.03.2025ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ,ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ.
ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ಹಾಗೂ ಕೊನೆಯ ದಿನಾಂಕದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ:
ಆಡಳಿತಾಧಿಕಾರಿಗಳು,
ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ,
ಮೊದಲನೇ ಮಹಡಿ, ಜೆ.ಸಿ. ರಸ್ತೆ,
ಬೆಂಗಳೂರು -560002
ಈ ಮೇಲಿನ ಪ್ರಕಟಣೆಯನ್ನು ವೆಬ್ಸೈಟ್ https://kpp.karnataka.gov.in ಅಲ್ಲಿ ಗಮನಿಸಬಹುದಾಗಿದೆ.
ದೂರವಾಣಿ ಸಂಖ್ಯೆ: 080-22484516 / 22107704 – ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
0 Comments