ಗ್ರಾಮಮಟ್ಟದಲ್ಲೇ ಬಿಪಿಎಲ್ ಕಾರ್ಡ್ ಪರಿಷ್ಕರಣೆ

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು ಸರಕಾರವು ಈಗ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ರಾಜ್ಯದಲ್ಲಿ ಸಾವಿರಾರು ಅನರ್ಹ ಬಿಪಿಎಲ್ ಕಾರ್ಡ್ ಗಳಿದ್ದು ಇವುಗಳ ರದ್ದತಿಗಾಗಿ ಸರಕಾರವು ಪರಿಷ್ಕರಣಾ ಕಾರ್ಯಕ್ಕೆ ಮುಂದಾಗಿದೆ. ಬಿಪಿಎಲ್ ಪಡಿತರ ಚೀಟಿಗಳ ಪರಿಷ್ಕರಣೆ ಸಂಬಂಧ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಸಿಇಒ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಪಿಡಿಒ, ಕಾರ್ಯದರ್ಶಿ, ಕಂದಾಯ ನಿರೀಕ್ಷಕ ಹಾಗೂ ಗ್ರಾಮ ಪಂಚಾಯತ್ ಲೆಕ್ಕಿಗರನ್ನೊಳಗೊಂಡ ಸಮಿತಿ ರಚಿಸಲಾಗುವುದು. ಈ ಸಮಿತಿಯು ಗ್ರಾಮಮಟ್ಟದಲ್ಲಿ ಭೌತಿಕವಾಗಿ ಪರಿಶೀಲಿಸಿ, ಅನರ್ಹರನ್ನು ಬಿಪಿಎಲ್ ನಿಂದ ಎಪಿಎಲ್ ಗೆ ಸೇರಿಸಲಿದೆ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದಾರೆ.
ಮಾಂಗಲ್ಯಂ ತಂತು ನಾನೇ ಪರಿಷತ್ನ ಪ್ರಶ್ನೋತ್ತರ ಕಲಾಪದಲ್ಲಿ ಸೋಮವಾರ ಸಿಟಿ ರವಿ ಅವರು ಕೇಳಿದ ಪ್ರಶ್ನೆಗೆ ಪ್ರತ್ಯುತ್ತರವಾಗಿ, "ಕೇಂದ್ರ ಸರಕಾರದ ಮಾನದಂಡಗಳನ್ವಯ ಬಿಪಿಎಲ್ ಕಾರ್ಡ್ ಪಡೆದಿರುವ ಅನರ್ಹರನ್ನು ಕೈ ಬಿಟ್ಟು ಅರ್ಹರಿಗೆ ಈ ಪಡಿತರ ಚೀಟಿ ವಿತರಿಸಲು ಪ್ರತಿಪಕ್ಷಗಳು ಸಹಕರಿಸಬೇಕು. ಅಧಿವೇಶನ ಮುಗಿದ ಕೂಡಲೇ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಿತಿ ರಚಿಸಲಾಗುವುದು" ಎಂದು ಹೇಳಿದರು.

ರಾಜ್ಯದಲ್ಲಿ 1.10 ಕೋಟಿ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದಿದ್ದು ಇವುಗಳಲ್ಲಿ ಪರಿಷ್ಕರಣೆಯಾದ ನಂತರ 20 ಲಕ್ಷದಷ್ಟು ಕಾರ್ಡ್ಗಳು ಅನರ್ಹ ಯಗೊಳ್ಳುವ ಸಾಧ್ಯತೆ ಇದೆ. ಸುಮಾರು 25 ಲಕ್ಷ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದಿದ್ದು ಈ ಪೈಕಿ ಒಂದು ಲಕ್ಷದಷ್ಟು ಮಂದಿ ಅಕ್ಕಿ ಪಡೆಯುತ್ತಿರಲಿಲ್ಲ. ಆದ್ದರಿಂದ ಈ ಕಾರ್ಡ್ಗಳಿಗೆ ಪಡಿತರ ವಿತರಣೆಯನ್ನು ನಿಲ್ಲಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. 

ಹೊಸದಾಗಿ ಆದ್ಯತಾ ಪಡಿತರ ಚೀಟಿ ಕೋರೆ 2023ರ ಮಾರ್ಚ್ ವರೆಗೆ 2,95,986 ಅರ್ಜಿಗಳು ಸಲ್ಲಿಕೆಯಾಗಿಲ್ಲ. ಈ ಪೈಕಿ 2,04,760 ಕಾರ್ಡ್ಗಳನ್ನು ವಿತರಿಸಲಾಗಿದೆ. ಬಾಕಿ ಇರುವ 91,000 ಅರ್ಜಿಗಳನ್ನು ಎರಡು ತಿಂಗಳೊಳಗೆ ವಿಲೇವಾರಿ ಮಾಡಲಾಗುವುದು. ಇದರಲ್ಲಿ 50ರಿಂದ 60 ಸಾವಿರ ಅರ್ಜಿಗಳು ಬಿಪಿಎಲ್ ಗೆ ಅರ್ಹವಾಗಿಲ್ಲ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ.

Post a Comment

0 Comments