ಗುಡ್ ಫ್ರೈಡೆ ಕಾರಣದಿಂದ ಯುಜಿ ಸಿಇಟಿ ಕನ್ನಡ ಪರೀಕ್ಷಾ ದಿನಾಂಕ ಬದಲಾವಣೆ..!!

ಯುಜಿ ಸಿಇಟಿ ಪರೀಕ್ಷೆಯ ದಿನಾಂಕ ಬದಲಾವಣೆ ಮಾಡಿದ್ದು ಏಪ್ರಿಲ್ 18ರಂದು ಗುಡ್ ಫ್ರೈಡೆ ಹಬ್ಬದ ಕಾರಣ ಎಪ್ರಿಲ್ 15ರಂದು ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿ ಪ್ರಕಟಣೆ ಹೊರಡಿಸಿದೆ.
ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ತಾರೀಖು 18.04.2025 ರಂದು ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಆದರೆ ಸದರಿ ದಿನಾಂಕದಂದು ಗುಡ್ ಫ್ರೈಡೇ ಹಬ್ಬ ವಾಗಿರುವುದರಿಂದ ಕೆಲವು ಅಭ್ಯರ್ಥಿಗಳು ಪರೀಕ್ಷಾ ದಿನಾಂಕವನ್ನು ಬದಲಾಯಿಸಲು ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ಕನ್ನಡ ಭಾಷಾ ಪರೀಕ್ಷೆಯನ್ನು 18 4 2025ರ ಬದಲಾಗಿ 15.04.2025ನೇ ಮಂಗಳವಾರದಂದು ನಡೆಸಲು ತೀರ್ಮಾನಿಸಿದೆ.

ಈಗಾಗಲೇ ನಿಗದಿಪಡಿಸಿ ಪ್ರಕಟಿಸಿರುವ ಸಿಇಟಿ 2025ರ ಪರೀಕ್ಷೆಗಳು 16.04.2025 ಮತ್ತು 17.04.2025ರಂದು ವೇಳಾಪಟ್ಟಿಯಂತೆ ನಡೆಸಲಾಗುವುದು, ಈಗಾಗಲೇ ಪ್ರಕಟಿಸಿರುವ ಈ  ವೇಳಾಪಟ್ಟಿಯಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. 

ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ (ಬೆಂಗಳೂರು, ಬೆಳಗಾವಿ, ವಿಜಯಪುರ, ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ)
15.04.2025 ರಂದು ಬೆಳಿಗ್ಗೆ 10.30 ರಿಂದ 11:30 ರವರೆಗೆ ಪರೀಕ್ಷೆ ನಡೆಸಲಾಗುವುದು. 

ಸಿಇಟಿ 2025ಕ್ಕೆ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಸದ್ಯದಲ್ಲಿಯೇ ಡೌನ್ಲೋಡ್ ಮಾಡಿಕೊಳ್ಳಲು ಪ್ರಾಧಿಕಾರದ ವೆಬ್ಸೈಟಿನಲ್ಲಿ ಲಿಂಕ್ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. 
ಹೆಚ್ಚಿನ ಮಾಹಿತಿಗಾಗಿ 
ಇ-ಮೇಲ್: keauthority-ka@nic.in
ವೆಬ್‌ಸೈಟ್: https://kea.kar.nic.in ಪರಿಶೀಲಿಸಬಹುದು.

Post a Comment

0 Comments