ಐಐಎಂಬಿ ಯಲ್ಲಿ ಉದ್ಯೋಗಾವಕಾಶ

ಬೆಂಗಳೂರಿನ ಪ್ರತಿಷ್ಠಿತ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂಬಿ) ಯಲ್ಲಿ ಸಹಾಯಕ ಭದ್ರತಾ ಮೇಲ್ವಿಚಾರಕ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 20ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿದವರಾಗಿರಬೇಕು. ಹಾಗೆಯೇ ಈ ಮೊದಲು ಕೆಲಸ ಮಾಡಿದ ಅನುಭವವಿರುವವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅಭ್ಯರ್ಥಿಗಳು ಗರಿಷ್ಠ 45 ವರ್ಷದೊಳಗಿನವರಾಗಿದ್ದರೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. 

ಹುದ್ದೆಗೆ ಸಲ್ಲಿಕೆಯಾದ ಅರ್ಜಿಗಳನ್ನು ಶಾರ್ಟ್ ಲಿಸ್ಟ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವಾರ್ಷಿಕ 8,50,000-9,30,000 ರೂಪಾಯಿವರೆಗೆ ವೇತನ ನಿಗದಿಪಡಿಸಲಾಗಿದೆ. 

ಹೆಚ್ಚಿನ ಮಾಹಿತಿಗಾಗಿ ಐಐಎಂಬಿ ವೆಬ್ಸೈಟ್ iimb.ac.in ಅನ್ನು ಪರಿಶೀಲಿಸಬಹುದು. 
ಅಧಿಸೂಚನೆಗಾಗಿ https://bit.ly/4iK0Exg ಅನ್ನು ಪರಿಶೀಲಿಸಬಹುದು.

Post a Comment

0 Comments