ಹಾಲಿನ ದರ ಏರಿಕೆ ಬಗ್ಗೆ ಕೆಎಂಎಫ್ ನಿಂದ ಸರ್ಕಾರದ ಮೇಲೆ ಪದೇ ಪದೇ ಒತ್ತಡ ಬೀಳುತ್ತಲೇ ಇದೆ. ಅದರೊಂದಿಗೆ ವಿಧಾನಪರಿಷತ್ ನಲ್ಲಿ ಸಚಿವ ವೆಂಕಟೇಶ್ ಅವರು ಹಾಲಿನ ದರ ಏರಿಕೆ ಅನಿವಾರ್ಯವೆಂದು ಸ್ಪಷ್ಟವಾಗಿ ಹೇಳಿದ್ದಾರೆ. ಎಷ್ಟು ರೂಪಾಯಿ ದರ ಹೆಚ್ಚಳ ಮಾಡಲಾಗುತ್ತದೆ ಎನ್ನುವ ಬಗ್ಗೆ ಸರಕಾರದೊಂದಿಗೆ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಸದಸ್ಯ ಉಮಾಶ್ರೀ ಕೇಳಿದ ಪ್ರಶ್ನೆಗೆ ಪ್ರತ್ಯುತ್ತರ ನೀಡಿದ ಸಚಿವರು, ಹಾಲು ಉತ್ಪಾದಕ ರೈತರ ಬೇಡಿಕೆ ಹಾಗೂ ಗ್ರಾಹಕರ ಹಿತರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.
ಹಾಲು ಉತ್ಪಾದಕ ರೈತರು ಲೀಟರ್ಗೆ 10 ರೂಪಾಯಿ ದರೆ ಏರಿಕೆ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಸರಕಾರ ಇನ್ನು ಅದಕ್ಕೆ ಒಪ್ಪಿಗೆ ನೀಡಿಲ್ಲ ಉತ್ಪಾದನಾ ವೆಚ್ಚ ಏರಿಕೆಯಾಗುತ್ತಿರುವುದರಿಂದ ರೈತರ ಬೇಡಿಕೆಯು ಸರಿಯಾಗಿದೆ ಮತ್ತು ಗ್ರಾಹಕರ ಹಿತ ಎರಡನ್ನು ಗಮನದಲ್ಲಿರಿಸಿಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಬೇಕಾಗಿದೆ ಒಟ್ಟು 9,04,547 ಫಲಾನುಭವಿಗಳಿದ್ದು, 656.07 ಕೋಟಿ ರೂಪಾಯಿ ಪ್ರೋತ್ಸಾಹ ಧನ ವಿತರಿಸಲು ಬಾಕಿಯಿದೆ.
0 Comments