ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸುವಂತೆ ಕಳೆದ ಹಲವು ವರ್ಷಗಳ ಬಹುದೊಡ್ಡ ಬೇಡಿಕೆಯಾಗಿತ್ತು. ಈ ಬಗ್ಗೆ ಹಲವು ಬಾರಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿದ್ದರು ಪ್ರಯತ್ನಕ್ಕೆ ಫಲ ಸಿಕ್ಕಿರಲಿಲ್ಲ. ಆದರೆ ಇಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿರುವ ಬಜೆಟ್ ನಲ್ಲಿ ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸಲಾಗುವುದು ಎಂಬ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.
ಪುತ್ತೂರಿನಲ್ಲಿ ಪ್ರಸ್ತುತ ಇರುವ ನೂರು ಹಾಸಿಗೆ ಸಾಮರ್ಥ್ಯದ ತಾಲೂಕ ಆಸ್ಪತ್ರೆಯನ್ನು ಉನ್ನತೀಕರಿಸಿ ಪ್ರಶಕ್ತ ವರ್ಷದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಹಲವು ದಶಕಗಳ ಬೇಡಿಕೆಯಾಗಿದ್ದ ಮೆಡಿಕಲ್ ಕಾಲೇಜು ಸ್ಥಾಪನೆಯ ಕನಸು ಕೊನೆಗೂ ನೆರವೇರುವ ಹಂತಕ್ಕೆ ಬಂದಿದೆ. ಪ್ರಸ್ತುತ ಪುತ್ತೂರಿನ ಶಾಸಕರಾದ ಅಶೋಕ್ ರೈಯವರು ಈ ಬಗ್ಗೆ ಶತ ಪ್ರಯತ್ನವನ್ನು ಮಾಡಿದ್ದು ಕೊನೆಗೂ ಯಶಸ್ಸು ಸಿಕ್ಕಿದೆ. ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸುವ ಬಗ್ಗೆ ಅಶೋಕ್ ರೈ ಅವರು ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಘೋಷಿಸಿದ್ದರು. ತಾವು ಚುನಾವಣೆಯಲ್ಲಿ ಗೆದ್ದ ಬಳಿಕ ಸರಕಾರದ ಮನವೊಲಿಸುವ ಪ್ರಯತ್ನವನ್ನೂ ಸಹ ಮಾಡಿದ್ದು, ಈ ಪ್ರಸ್ತಾವನೆಯನ್ನು ಸರಕಾರದ ಗಮನಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
0 Comments