ಶಬಾನ ಅಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ

16ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅದ್ದೂರಿಯಾಗಿ ತೆರೆ ಬಿದ್ದಿದೆ. ಈ ಚಲನಚಿತ್ರೋತ್ಸವದಲ್ಲಿ ಪ್ರತಿವರ್ಷ ಹಿರಿಯ ಸಿನಿಮಾ ಸಾಧಕರನ್ನು ಗುರುತಿಸಿ ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುತ್ತದೆ. ಈ ವರ್ಷ ಈ ಸಾಧನೆಗಾಗಿ ಖ್ಯಾತ ನಟಿ ಶಬಾನ ಅಜ್ಮೀರ್ ಅವರನ್ನು ಗುರುತಿಸಿ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ. 
ಶಬಾನಾ ಅಜ್ಮಿ ಅವರು ಆರು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದು, ಚಲನಚಿತ್ರ ರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೂ ಕಲೆ, ಸಾಹಿತ್ಯ, ಸಾಂಸ್ಕೃತಿಕ ರಂಗದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಶಬಾನಾ ಅಜ್ಮಿ ಐದು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಮಾಡಿದ್ದಾರೆ. ಅವರ ಕಲಾ ಸೇವೆಯನ್ನು ಪರಿಗಣಿಸಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿಯು ಈ ಪ್ರಶಸ್ತಿ ನೀಡಿ ಗೌರವಿಸಿದೆ.

Post a Comment

0 Comments