ನಮ್ಮ ಮೆಟ್ರೋದಲ್ಲಿ ಟ್ರೈನ್ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿ.ಎಂ.ಆರ್.ಸಿ.ಎಲ್) ಒಟ್ಟು 50 ಟ್ರೈನ್ ಆಪರೇಟರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದು ಆಸಕ್ತ ಅಭ್ಯರ್ಥಿಗಳು ಎಪ್ರಿಲ್ 4 ತಾರೀಖಿನ ಒಳಗೆ ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೆಟ್ರಿಕ್ಯುಲೇಷನ್ ಮತ್ತು ಎಲೆಕ್ಟ್ರಿಕ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಅಥವಾ ಇನ್ಯಾವುದೇ ವಿಷಯಗಳಲ್ಲಿ ಮೂರು ವರ್ಷದ ಡಿಪ್ಲೋಮಾ ಓದಿದವರು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ ಅವರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 38 ವರ್ಷದೊಳಗಿರಬೇಕು. ಬಿ ಎಂ ಆರ್ ಸಿ ಎಲ್ ನಿಯಮಾನುಸಾರ ವಿವಿಧ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ. ಮಾಸಿಕ 35,000 ದಿಂದ 82,660 ರೂಪಾಯಿಗಳವರೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಲಾಗಿದೆ. ಲಿಖಿತ ಪರೀಕ್ಷೆ, ಸಂದರ್ಶನ, ವೈದ್ಯಕೀಯ ಪರೀಕ್ಷೆ ಹಾಗೂ ಅಭ್ಯರ್ಥಿ ಹೊಂದಿರುವ ಕೌಶಲಗಳ ಆಧಾರದ ಮೇಲೆ ನೇಮಕಾತಿ ನಡೆಯಲಿದೆ.

ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವಿಳಾಸ: general manager (HR), Bengalore Metro Rail Corporation Limited, 3rd Floor, BMTC Complex, KH road, Shanti Nagar, Bengalore- 560027

ಹೆಚ್ಚಿನ ಮಾಹಿತಿಗಾಗಿ https://english.bmrc.co.in ಅನ್ನು ಭೇಟಿ ನೀಡಬಹುದು

Post a Comment

0 Comments