ಒಳ ಮೀಸಲು ನಿರ್ಧಾರದವರೆಗೆ ಸಿವಿಲ್ ನೇಮಕಾತಿ ರದ್ದು!!

ಕರ್ನಾಟಕದ‌ ಸಿವಿಲ್ ಸೇವೆಗಳಲ್ಲಿ ಒಳ ಮೀಸಲಾತಿ ವಿಚಾರ ನಿರ್ಧಾರವಾಗುವವರೆಗೆ ನೇರ ನೇಮಕಾತಿ ಮಾಡದಿರಲು ನವೆಂಬರ್ 25 2024 ರಂದು ಆದೇಶ ಹೊರಡಿಸಲಾಗಿದೆ. ಈ ಆದೇಶ ಹೊರಡಿಸಿದ್ದರೂ ಕೆಲವು ನೇಮಕಾತಿ ಪ್ರಾಧಿಕಾರಗಳು ಹೊಸ ಅಧಿಸೂಚನೆ ಹೊರಡಿಸಿದ್ದು ಅಂತಹ ಅಧಿಸೂಚನೆಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ರದ್ದುಪಡಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಒಳ ಮೀಸಲಾತಿ ನಿರ್ಧಾರ ಆಗುವವರೆಗೆ ಮೀಸಲಾತಿ ಅನ್ವಯವಾಗುವ ಹುದ್ದೆಗಳಿಗೆ ಮುಂದಿನ ಆದೇಶದವರೆಗೆ ಯಾವುದೇ ನೇರ ನೇಮಕಾತಿ ಅಧಿಸೂಚನೆ ಹೊರಡಿಸಬಾರದು ಎಂದು ನವೆಂಬರ್ 25, 2024ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಹೀಗಿದ್ದರೂ ಕೆಲ ನೇಮಕಾತಿ ಪ್ರಾಧಿಕಾರಗಳು ಈ ಅಧಿಸೂಚನೆಗಳನ್ನು ಉಲ್ಲಂಘಿಸಿ ನೇರ ನೇಮಕಾತಿ ಮಾಡಲು ಹೊಸ ಅಧಿಸೂಚನೆಗಳನ್ನು ಹೊರಡಿಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿನ್ನಲೆಯಲ್ಲಿ ನವೆಂಬರ್ 25 ರ ನಂತರ ನೇರ ನೇಮಕಾತಿಗಾಗಿ ಯಾವುದೇ ಹೊಸ ಅಧಿ ಸೂಚನೆಗಳನ್ನು ಹೊರಡಿಸಿದ್ದರೆ ತಕ್ಷಣದಿಂದ ಜಾರಿಗೆ ಬರುವಂತೆ ಅಧಿಸೂಚನೆಗಳನ್ನು ರದ್ದು ಪಡಿಸಲು ಸೂಚಿಸಲಾಗಿದೆ.

ಅಷ್ಟೇ ಅಲ್ಲದೆ ನವೆಂಬರ್ 25ರಂದು ಹೊರಡಿಸಲಾಗಿರುವ ಅಧಿಸೂಚನೆಯನ್ನು ಉಲ್ಲಂಘಿಸಿ ಅಧಿಸೂಚನೆ ಹೊರಡಿಸಿರುವ ನೇಮಕಾತಿ ಪ್ರಾಧಿಕಾರಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಆಡಳಿತ ಇಲಾಖೆಯ ಕಾರ್ಯದರ್ಶಿಗಳಿಗೆ ಸೂಚಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ.

Post a Comment

0 Comments