ಪಹಲ್ಗಾಮ್ ಉಗ್ರ ದಾಳಿಯಲ್ಲಿ ಮೃತರಾದವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಜಮ್ಮು ಕಾಶ್ಮೀರ ಸರ್ಕಾರ..!!

ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಿನ್ನೆ ಪ್ರವಾಸಿಗರ ಮೇಲೆ ನಡೆದ ದಾಳಿಯಲ್ಲಿ ಒಟ್ಟು ಇಬ್ಬರು ವಿದೇಶಿಗರು ಸೇರಿ ಒಟ್ಟು 26 ಮಂದಿ ಭಾರತೀಯರು ಮೃತ ಪಟ್ಟಿದ್ದು, ಮೃತರ ಕುಟುಂಬಗಳಿಗೆ ಜಮ್ಮು-ಕಾಶ್ಮೀರ ಸರಕಾರವು ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. 
ಈ ಕುರಿತು ಮಾಹಿತಿ ನೀಡಿರುವ ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲ, "ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ತೀವ್ರ ಆಘಾತವಾಗಿದ್ದು, ಅತಿವೃಷ್ಟಿತನಾಗಿದ್ದೇನೆ. ಅಮಾಯಕರ ವಿರುದ್ಧ ನಡೆದ ಇಂತಹ ಹೇಯ ಕೃತ್ಯಗಳಿಗೆ ಸಮಾಜದಲ್ಲಿ ಎಂದಿಗೂ ಸ್ಥಾನವಿಲ್ಲ. ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ನಾಗರಿಕರಿಗೆ ನನ್ನ ಸಂತಾಪಗಳು"ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. 

ಹಾಗೆಯೇ ಈ ಭಯೋತ್ಪಾದಕ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡವರ ಕುಟುಂಬಕ್ಕೆ ಎರಡು ಲಕ್ಷ ಹಾಗೂ ಸಣ್ಣಪುಟ್ಟ ಗಾಯವಾದವರಿಗೆ ಒಂದು ಲಕ್ಷ ಪರಿಹಾರವನ್ನು ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ. ಮೃತ ದೇಹಗಳನ್ನು ಹುಟ್ಟೂರಿಗೆ ಕಳುಹಿಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಗಾಯಗೊಂಡವರಿಗೆ ಅತ್ಯುತ್ತಮ ರೀತಿಯಲ್ಲಿ ವೈದ್ಯಕೀಯ ಸೇವೆಗಳನ್ನು ಒದಗಿಸಲಾಗುತ್ತಿದೆ. ಪ್ರತೀ ಕುಟುಂಬದ ದುಃಖದೊಂದಿಗೆ ನಾವು ಬಾಗಿಯಾಗುತ್ತೇವೆ. ನಿಮ್ಮ ಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಧೈರ್ಯದ ಮಾತುಗಳನ್ನು ಹೇಳಿದ್ದಾರೆ.

Post a Comment

0 Comments