ಏಪ್ರಿಲ್ 17ರಂದು ವಿಶೇಷ ಸಚಿವ ಸಂಪುಟ ಸಭೆ ನಡೆಸಲಿರುವ ಕರ್ನಾಟಕ ಸರ್ಕಾರ..!!

ಕರ್ನಾಟಕ ರಾಜ್ಯ ಸರ್ಕಾರವು ಏಪ್ರಿಲ್ 17 ರಂದು ಮಹತ್ವದ ವಿಶೇಷ ಸಂಪುಟ ಸಭೆ ಕರೆದಿದ್ದು, ಜಾತಿ ಗಣತಿ ವರದಿ ಕುರಿತು ಮಹತ್ವದ ಚರ್ಚೆ ನಡೆಸಲಿದೆ.


ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರ ದತ್ತಾಂಶಗಳ ಅಧ್ಯಯನ ವರದಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಲಾಗಿದ್ದು, ಈ ವರದಿ ಕುರಿತು ಚರ್ಚಿಸಲು ದಿನಾಂಕ 17.4.2025 ರಂದು ವಿಶೇಷ ಸಚಿವ ಸಂಪುಟ ಸಭೆಯನ್ನು ಆಯೋಜಿಸಲಾಗಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ ಪಾಟೀಲ್ ಅವರು ತಿಳಿಸಿದ್ದಾರೆ.

Post a Comment

0 Comments